ವೈಯಕ್ತಿಕ ಸ್ವಚ್ಛತೆ ಬಗ್ಗೆ ಗಮನಹರಿಸಿ: ಡಾ.ಶಶಿಕಲಾ
ಕ.ಪ್ರ.ವಾರ್ತೆ ಪಿರಿಯಾಪಟ್ಟಣ ಆ. 6
ಸಾರ್ವಜನಿಕರು ವೈಯಕ್ತಿಕ ಸ್ವಚ್ಛತೆ ಬಗ್ಗೆ ಎಚ್ಚರ ವಹಿಸದಿದ್ದರೆ ಮಾರಣಾಂತಿಕ ಕಾಯಿಲೆಗಳಿಗೂ ತತ್ತಾಗಬಹುದು ಎಂದು ತಾ. ಆರೋಗ್ಯಾಧಿಕಾರಿ ಡಾ. ಶಶಿಕಲಾ ಹೇಳಿದರು.
ಇಲ್ಲಿನ ಅತ್ಯಂತ ಹೀನ ಸ್ಥಿತಿಯಲ್ಲಿರುವ ಹಂದಿ ಜೋಗಿಗಳ ಕಾಲೋನಿಗೆ ಭೇಟಿ ನೀಡಿ, ಅಲ್ಲಿನ ಸ್ಥಿತಿಯ ಬಗ್ಗೆ ಮಾಹಿತಿ ಪಡೆದು ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪಟ್ಟಣದ ಹೃದಯ ಭಾಗದಲ್ಲಿರುವ ಅದರಲ್ಲಿಯೂ ತಾಲೂಕಿನಲ್ಲಿ ಪ್ರಸಿದ್ದ ದೇವಾಲಯವಾಗಿರುವ ಮಸಣೀಕಮ್ಮ ದೇವಾಲಯದ ಪಕ್ಕದಲ್ಲಿರುವ ಹಂದಿ ಜೋಗಿಗಳ ಕಾಲೋನಿಯಲ್ಲಿ ಸ್ವಚ್ಛತೆ ಕೊರತೆ ಇದ್ದು, ಈ ಬಗ್ಗೆ ಪಪಂಗೆ ಪತ್ರ ಬರೆಯಲಾಗುವುದು ಎಂದು ತಿಳಿಸಿದರು.
ತಾಲೂಕು ಆರೋಗ್ಯ ನಿರೀಕ್ಷಕ ಕೆ.ಆರ್. ಪ್ರಕಾಶ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ರಮೇಶ್, ಹಿರಿಯ ಮಹಿಳಾ ಆರೋಗ್ಯ ಸಹಾಯಕಿ ಕೆ.ಎಸ್. ಭವಾನಿ ಇದ್ದರು.