ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಇತಿಹಾಸ ಕೃತಿ ರಿಯಾಯಿತಿ ದರದಲ್ಲಿ ಮಾರಾಟ

Rashmi Kasaragodu
Updated On : 8 Aug 2013, 12:18 pm

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯ ಪ್ರಸಾರಾಂಗವು ಭಾರತದ ಪ್ರೌಢ ಇತಿಹಾಸದ ಪ್ರತಿಯನ್ನು ರಿಯಾಯಿತಿ ದರದಲ್ಲಿ ಮಾರಾಟ ಮಾಡುತ್ತಿದೆ. ಆನ್ ಅಡ್ವಾನ್ಸ್ಡ್ ಹಿಸ್ಟರಿ ಆಫ್ ಇಂಡಿಯಾ ಕೃತಿಯ ಮೂಲ ಕೃತಿಕಾರರಾದ ಆರ್.ಸಿ. ಮಜುಮ್ದಾರ್, ಎಚ್.ಸಿ. ರಾಯ್ ಚೌಧುರಿ ಹಾಗೂ ಕಾಲೀಕಿಂಕರ ದತ್ತ ಅವರ 1100 ಪುಟಗಳ ಈ ಗ್ರಂಥವನ್ನು ಎನ್.ಎಸ್. ಶಾರದಾ ಪ್ರಸಾದ್ ಕನ್ನಡಕ್ಕೆ ಭಾಷಾಂತರಿಸಿದ್ದಾರೆ. 800 ಈ ಕೃತಿಯನ್ನು 600 ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಆಸಕ್ತ ಓದುಗರು ಮತ್ತು ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಪ್ರಸಾರಾಂಗ ನಿರ್ದೇಶಕ ಪ್ರೊ. ಸಿ. ನಾಗಣ್ಣ ತಿಳಿಸಿದ್ದಾರೆ.
ಟಿಎಂಸಿ ದಬ್ಬಾಳಿಕೆ ಖಂಡಿಸಿ ಸಿಪಿಐಎಂ ಪ್ರತಿಭಟನೆ
ಮೈಸೂರು: ಪಶ್ಚಿಮ ಬಂಗಾಳದಲ್ಲಿ ಪ್ರಜಾಪ್ರಭುತ್ವ ಉಳಿಸಲು ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷದ (ಮಾರ್ಕ್ಸ್ವಾದಿ) ಕಾರ್ಯಕರ್ತರು ಗಾಂಧಿಚೌಕದಲ್ಲಿ ಬುಧವಾರ ಪ್ರತಿಭಟಿಸಿದರು. ಇತ್ತೀಚೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪಂಚಾಯತ್ ಚುನಾವಣೆಗಳಲ್ಲಿ ಅಕ್ರಮ ನಡೆದಿದೆ. ಸಿಪಿಎಂ ಪಕ್ಷದ ಅಭ್ಯರ್ಥಿಗಳಿಗೆ ಆಡಳಿತರೂಢ ತೃಣಮೂಲಕ ಕಾಂಗ್ರೆಸ್ ಪಕ್ಷದವರು (ಟಿಎಂಸಿ) ಕೊಲೆ ಬೆದರಿಕೆ ಹಾಕಿದ್ದಾರೆ. ಟಿಎಂಸಿ ಗೂಂಡಾಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು. ಚುನಾವಣಾ ಆಯೋಗ, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ನ ಆದೇಶಗಳನ್ನು ಅಧಿಕಾರದಲ್ಲಿರುವ ಟಿಎಂಸಿ ಪಕ್ಷವು ಕಡೆಗಣಿಸಿದೆ. ಚುನಾವಣೆ ಹಿನ್ನೆಲೆಯಲ್ಲಿ 24 ಮಂದಿ ಸಿಪಿಎಂ ಮುಖಂಡರು ಹಾಗೂ ಕಾರ್ಯಕರ್ತರನ್ನು ಕೊಲೆ ಮಾಡಲಾಗಿದೆ ಎಂದು ಅವರು ಆರೋಪಿಸಿದರು. ಸಿಪಿಎಂ ನಗರ ಕಾರ್ಯದರ್ಶಿ ಸೋಮಶಂಕರ್, ಮುಖಂಡರಾದ ಲ. ಜಗನ್ನಾಥ, ಬಾಲಾಜಿರಾವ್, ಮಹೇಶ್ಕುಮಾರ್, ಶ್ರೀಧರ್, ಬಲರಾಮ್, ಬಸವಯ್ಯ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement