ಕಾರ್ಮಿಕರ ಸೇವೆ ಕಾಯಂಗೊಳಿಸಿ
ಕ.ಪ್ರ.ವಾರ್ತೆ ಮೈಸೂರು ಆ. 7
ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹೇಳಿರುವಂತೆ ಗುತ್ತಿಗೆ ಪೌರಕಾರ್ಮಿರ ಸೇವೆಯನ್ನು ಕಾಯಂಗೊಳಿಸಬೇಕು ಎಂದು ಪೌರಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಎನ್. ಮಾರ ಆಗ್ರಹಿಸಿದರು.
ಈಗಾಗಲೇ ಈ ಸಂಬಂಧ ಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಶಾಸಕರಿಗೆ ಮನವಿ ಸಲ್ಲಿಸಲಾಗಿದೆ. ಆದಷ್ಟು ಬೇಗ ಕಾಯಂಗೊಳಿಸದಿದ್ದರೇ ಶಾಸಕರ ಮನೆ ಎದುರು ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಎಚ್ಚರಿಸಿದರು. ಮೈಸೂರು ನಗರಪಾಲಿಕೆ ಪೌರಕಾರ್ಮಿಕರ ಸಂಘದ ನೂತನ ಅಧ್ಯಕ್ಷರಾಗಿ ಎನ್.ಆರ್. ರಮೇಶ್, ಪ್ರಧಾನ ಕಾರ್ಯದರ್ಶಿಯಾಗಿ ಮಂಚಯ್ಯ ಅವರನ್ನು ಒಂದು ವರ್ಷದ ಅವಧಿಗೆ ಆಯ್ಕೆ ಮಾಡಲಾಗಿದೆ ಎಂದರು.
ಮಹಾಪ್ರಧಾನ ಕಾರ್ಯದರ್ಶಿ ಹನುಮಂತ, ಸದಸ್ಯ ಕುಮಾರಸ್ವಾಮಿ, ಅಧ್ಯಕ್ಷ ಎನ್.ಆರ್. ರಮೇಶ್, ಪ್ರಧಾನ ಕಾರ್ಯದರ್ಶಿ ಮಂಚಯ್ಯ ಇದ್ದರು.