ನಾಳೆ ವಿವಿಧೆಡೆ ಸಿಎಂ ಸಿದ್ದರಾಮಯ್ಯ ಹುಟ್ಟುಹಬ್ಬ
ಕ.ಪ್ರ.ವಾರ್ತೆ ಮೈಸೂರು ಆ. 10
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 66ನೇ ಹುಟ್ಟುಹಬ್ಬವನ್ನು ಆ.12 ರಂದು ನಗರದ ವಿವಿಧೆಡೆ ಆಚರಿಸಲಾಗುತ್ತಿದೆ. ಅಂದು ನೂರೊಂದು ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ, ಚಾಮುಂಡೇಶ್ವರಿ ಸನ್ನಿಧಿಯಲ್ಲಿ ವಿಶೇಷ ಪೂಜೆ, ಸಿಹಿ ವಿತರಣೆ ಹಾಗೂ 101 ಈಡುಗಾಯಿ ಒಡೆಯಲಾಗುವುದು ಎಂದು ಕಾಂಗ್ರೆಸ್ ಪರಿಶಿಷ್ಟ ಪಂಗಡ ವಿಭಾಗದ ನಗರಾಧ್ಯಕ್ಷ ಡಿ.ಆರ್. ಚಂದ್ರನಾಯಕ್, ದೇವರಾಜ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜೆ.ಮಂಜುನಾಥ್, ನರಸಿಂಹರಾಜ ಕಾಂಗ್ರೆಸ್ ಸಮಿತಿ ಅಧ್ಯಕ್ಷ ದಿನೇಶ್, ಹಿಂದುಳಿದ ವರ್ಗಗಳ ನಗರಾಧ್ಯಕ್ಷ ಎಂ.ಶಿವಮಲ್ಲು, ದೇವರಾಜ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್.ಆರ್. ರವಿಕುಮಾರ್ ತಿಳಿಸಿದ್ದಾರೆ.
ಕಣ್ಣಿನ ತಪಾಸಣೆ: ಸಿದ್ದರಾಮಯ್ಯ ಜನ್ಮದಿನದ ಅಂಗವಾಗಿ ಆ.12ರ ಬೆಳಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ ಕಣ್ಣಿನ ಪೊರೆ ಉಚಿತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರವನ್ನು ಕನಕಗಿರಿ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದು, ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳುವಂತೆ ಎಂಡಿಎಸ್ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಕಾರ್ಯದರ್ಶಿ ಕಂಸಾಳೆ ರವಿ ಕೋರಿದ್ದಾರೆ.
ಆ.12ರ ಬೆಳಗ್ಗೆ 11ಕ್ಕೆ ಸಿದ್ದರಾಮಯ್ಯ ಹುಟ್ಟುಹಬ್ಬ ಅಂಗವಾಗಿ ಲಷ್ಕರ್ ಮೊಹಲ್ಲಾ ಇರ್ವಿನ್ ರಸ್ತೆಯಲ್ಲಿರುವ ಕುರುಬರ ಸಂಘದಲ್ಲಿ ಹಾಲು ವಿನಿಯೋಗ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಗೌರವ ಕಾರ್ಯದರ್ಶಿ ಸಿ. ಮಂಜುನಾಥ್ ತಿಳಿಸಿದ್ದಾರೆ.
ಸಿದ್ದರಾಮಯ್ಯ ಜನ್ಮದಿನ ಅಂಗವಾಗಿ ಆ.12ರ ಬೆಳಗ್ಗೆ 10.30ಕ್ಕೆ ಜಯನಗರ ರಾಯಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ, ಪೆನ್, ಸಿಹಿ ವಿತರಣೆ ಆಯೋಜಿಸಲಾಗಿದೆ.