ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

'ಪರಿಶ್ರಮದ ಮೂಲಕ ಗುರಿ ಮುಟ್ಟಲು ಸಾಧ್ಯ'

Rashmi Kasaragodu
Updated On : 12 Aug 2013, 11:34 am

ಕ.ಪ್ರ.ವಾರ್ತೆ     ಮೈಸೂರು     ಆ. 12
ಪ್ರಾಮಾಣಿಕತೆ ಮತ್ತು ಪರಿಶ್ರಮಗಳಿಂದ ಗುರಿ ಮುಟ್ಟಲು ಸಾಧ್ಯ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಪ್ರೊ.ನೀ. ಗಿರಿಗೌಡ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಇತ್ತೀಚೆಗೆ ನಗರದ ಇನ್ಸ್ಟಿಟ್ಯೂಟ್ ಆಫ್ ಎಜುಕೇಷನ್ ಬಾಲಕಿಯರ ಪ್ರೌಢಶಾಲೆಯಲ್ಲಿ ಅನುಭವ ಟ್ಯುಟೋರಿಯಲ್ಸ್, ವೆಂಕಟಗಿರಿ ಚಾರಿಟಬಲ್ ಟ್ರಸ್ಟ್, ಹಿರಣ್ಮಯಿ ಸಾಂಸ್ಕೃತಿಕ ಪ್ರತಿಷ್ಠಾನ ಸಂಯುಕ್ತವಾಗಿ ಆಯೋಜಿಸಿದ್ದ ಸಾಹಿತ್ಯ, ಸಂಸ್ಕೃತಿ ಪ್ರತಿಭಾ ಸಂಗಮ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅಂಕ ಗಳಿಕೆಯೇ ಶಿಕ್ಷಣದ ಗುರಿಯಲ್ಲ. ಶಿಕ್ಷಣ ಎಂದರೆ ಬದುಕಿನ ಪರಿವರ್ತನೆ. ಇಂಗ್ಲಿಷ್ ಭಾಷೆಯೂ ಸೇರಿದಂತೆ ಎಲ್ಲ ಭಾಷೆಗಳ ಒಳ್ಳೆಯ ಅಂಕಗಳನ್ನು ಕಲಿಯಬೇಕಾದ ಹಾಗೂ ಪಠ್ಯ ಚಟುವಟಿಕೆಗಳ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಂಡು ಆದರ್ಶ ವ್ಯಕ್ತಿಗಳ ಬಗ್ಗೆ ತಿಳಿಯಬೇಕಾದ ಹಾಗೂ ಅವರ ಆದರ್ಶಗಳನ್ನು ಅನುಸರಿಸಬೇಕಾದ ಅಗತ್ಯಗಳ ಬಗ್ಗೆ ಒತ್ತಿ ಹೇಳಿದರು.
ಇದೇ ವೇಳೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಎಂ.ಆರ್. ಸುಶ್ಮಿತಾ, ಆರ್. ಮೇಘವರ್ಷಿಣಿ, ಜಿ. ಪ್ರೀತಂ, ಎನ್. ಕವಿಕುಯಿಲ್ ಅವರನ್ನು ಸನ್ಮಾನಿಸಲಾಯಿತು.
ಸಮಾಜ ಸೇವಕ ಕೆ. ರಘುರಾಂ ಅಧ್ಯಕ್ಷತೆ ವಹಿಸಿದ್ದರು.
ಕಸಾಪ ಜಿಲ್ಲಾಧ್ಯಕ್ಷ ಎಂ. ಚಂದ್ರಶೇಖರ್ ವಿದ್ಯಾರ್ಥಿಗಳಿಗೆ ಕನ್ನಡ ಪುಸ್ತಕ ವಿತರಿಸಿದರು. ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕ ಎನ್. ದ್ವಾರಕಿ, ಶಾಲಾ ಮುಖ್ಯೋಪಾಧ್ಯಾಯ ಎಂ.ಬಿ. ತಿಪ್ಪೇಸ್ವಾಮಿ, ಚಂದ್ರೇಗೌಡ ಇದ್ದರು. ಎಸ್. ಸಂಗಪ್ಪ ಸ್ವಾಗತಿಸಿದರು. ವಿ. ನಾರಯಣರಾವ್ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement