ಅಪರಿಚಿತ ವ್ಯಕ್ತಿ ಸಾವು
ಮೈಸೂರು: ಎನ್.ಆರ್. ಮೊಹಲ್ಲಾ ಇನ್ಸ್ಟಿಟ್ಯೂಟ್ ಆಫ್ ಎಜುಕೇಷನ್ ಶಾಲೆ ಪಕ್ಕದಲ್ಲಿ ಪ್ರಜ್ಞೆ ತಪ್ಪಿ ಬಿದ್ದು ಕೆ.ಆರ್. ಆಸ್ಪತ್ರೆಗೆ ದಾಖಲಾಗಿದ್ದ ಅಪರಿಚಿತ ವ್ಯಕ್ತಿ ಭಾನುವಾರ ಮೃತಪಟ್ಟಿದ್ದಾರೆ. ಚಹರೆ- 65 ವರ್ಷ, 5.3 ಅಡಿ ಎತ್ತರ, ಸಾಧಾರಣ ಶರೀರ, ಎಣ್ಣೆಗೆಂಪು ಮೈಬಣ್ಣ, ಕೋಲು ಮುಖ, ಬಲ ಪಕ್ಕೆ ಮೇಲೆ ಕಪ್ಪು ಕಾರಳ್ಳು ಇದೆ. ಬೂದು ಬಣ್ಣದ ಶರ್ಟ್ ಧರಿಸಿದ್ದಾರೆ. ಮೃತರ ವಾರಸುದಾರರು ಇದ್ದಲ್ಲಿ ದೂ. 0821- 2418312 ಸಂಪರ್ಕಿಸಲು ಎನ್.ಆರ್. ಠಾಣೆ ಪೊಲೀಸರು ಕೋರಿದ್ದಾರೆ.