ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಯುಪಿಎ ವಿರುದ್ಧ ಎಬಿವಿಪಿ ಪ್ರತಿಭಟನೆ

Rashmi Kasaragodu
Updated On : 14 Aug 2013, 12:14 pm

ಕ.ಪ್ರ.ವಾರ್ತೆ    ಮೈಸೂರು    ಆ. 13
ಕೇಂದ್ರ ಸರ್ಕಾರದ ಭ್ರಷ್ಟಾಚಾರ ವಿರುದ್ಧ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟಿಸಿದರು.
ಯುಪಿಎ ಸರ್ಕಾರ ಸ್ವತಂತ್ರ ಭಾರತದ ಇತಿಹಾಸದಲ್ಲಿಯೇ ಅತ್ಯಂತ ಭ್ರಷ್ಟವಾಗಿದೆ. ಭ್ರಷ್ಟ ಕೇಂದ್ರ ಸರ್ಕಾರದ ವಿರುದ್ಧ ಜನಾಂದಲೋನ ಹಮ್ಮಿಕೊಂಡು, ಭ್ರಷ್ಟಾಚಾರ, ಜನವಿರೋಧಿ ಯೋಜನೆ ಮತ್ತು ತುಷ್ಟೀಕರಣ ನೀತಿಯ ವಿರುದ್ಧ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಮುಖಂಡರು ತಿಳಿಸಿದರು.
ಕೇಂದ್ರ ಸರ್ಕಾರವು 2 ಲಕ್ಷ ಕೋಟಿಗೂ ಮೀರಿ ಭ್ರಷ್ಟಾಚಾರ ಮಾಡಿದೆ. ಇದರಲ್ಲಿ ಹಲವಾರು ಕೇಂದ್ರ ಸಚಿವರು ಭಾಗಿಯಾಗಿದ್ದಾರೆ. ಹಣದುಬ್ಬರ ಏರಿಕೆ ತಡೆಗಟ್ಟುವಲ್ಲಿ ಸರ್ಕಾರ ವಿಫಲವಾಗಿದ್ದು, ರುಪಾಯಿ ಮೌಲ್ಯ ಕುಸಿತ ಕಾಣುತ್ತಿದೆ. ಆಂತರಿಕ ಮತ್ತು ಬಾಹ್ಯ ಸುರಕ್ಷತೆ ಕಾಪಾಡುವಲ್ಲಿ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ಭ್ರಷ್ಟ ಕೇಂದ್ರ ಸರ್ಕಾರವನ್ನು ರಾಷ್ಟ್ರಪತಿಯವರು ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.
ಶಿಕ್ಷಣ ಕ್ಷೇತ್ರದಲ್ಲಿ ವ್ಯಾಪಾರೀಕರಣ, ಭ್ರಷ್ಟಾಚಾರ, ಅರಾಜಕತೆ ನಡೆಯುತ್ತಿರುವುದಕ್ಕೆ ಕೇಂದ್ರ ಸರ್ಕಾರ ನೇರ ಹೊಣೆಯಾಗಿದೆ. ವಿದೇಶದಲ್ಲಿರುವ ಕಪ್ಪು ಹಣವನ್ನು ಭಾರತಕ್ಕೆ ಮರಳಿ ತರಲು ಕಾನೂನು ರೂಪಿಸಬೇಕು. ಭ್ರಷ್ಟರ ಹೆಸರು ಬಹಿರಂಗಪಡಿಸಬೇಕು. ನ್ಯಾಯಾಂಗ, ಚುನಾವಣೆ ಪದ್ಧತಿ, ಆಡಳಿತ, ಪೊಲೀಸ್, ಶಿಕ್ಷಣ ವ್ಯವಸ್ಥೆಗಳಲ್ಲಿ ಸುಧಾರಣೆ ತರಬೇಕು ಎಂದು ಆಗ್ರಹಿಸಿದರು.
ಎಬಿವಿಪಿ ಮುಖಂಡರಾದ ನಾಗೇಂದ್ರಸ್ವಾಮಿ, ಶಿವಕುಮಾರ್, ರಾಕೇಶ್, ಶರತ್, ಶ್ರೀಕರ್ ಭಟ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement