ಮೈಸೂರು

ರಾವಂದೂರು ಸಹಕಾರ ಸಂಘಕ್ಕೆ 4.56 ಲಕ್ಷ ಲಾಭ: ವಿಜಯೇಂದ್ರ

ಕ.ಪ್ರ.ವಾರ್ತೆ  ರಾವಂದೂರು  ಆ. 14
2013- 14ನೇ ಸಾಲಿಗೆ ರಾವಂದೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 1.5 ಕೋಟಿಗಳಿಗೂ ಮೀರಿದ ವ್ಯವಹಾರ ನಡೆಸಿ 4.56 ಲಕ್ಷ ಲಾಭದಲ್ಲಿ ಮುನ್ನಡೆದಿದೆ ಎಂದು ಸಂಘದ ಕಾರ್ಯ ನಿರ್ವಹಣಾಧಿಕಾರಿ ಆರ್.ಎ. ವಿಜಯೇಂದ್ರ ಹೇಳಿದರು.
ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಏರ್ಪಡಿಸಿದ್ದ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿ, ಸಹಕಾರ ಸಂಘಗಳಲ್ಲಿ ಸಾಲ ಪಡೆಯುವುದಷ್ಟೆ ಉದ್ದೇಶವಾಗಬಾರದು. ಪಡೆದ ಸಾಲವನ್ನು ಸರಿಯಾದ ಸಮಯದಲ್ಲಿ ಪಾವತಿಸಿ ಇಲಾಖೆಯಿಂದ ದೊರೆಯುವ ಸಹಾಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು.
ಸಹಕಾರ ಸಂಘದ ಅಧ್ಯಕ್ಷ ಸಂಪತ್ ಮಾತನಾಡಿ, ಸರ್ಕಾರದ ಸಾಲ ಮನ್ನಾ ಯೋಜನೆಯಡಿಯಲ್ಲಿ ಸಂಘದ 189 ರೈತರಿಗೆ ತಲಾ 25 ಸಾವಿರ ಸಾಲ ಮನ್ನಾ ಆಗಿದ್ದು, ಸರ್ಕಾರದಿಂದ ಸಂಘಕ್ಕೆ ಇದು ಪಾವತಿಯಾದ ತಕ್ಷಣ ಇದು ರೈತರಿಗೆ ಜಮಾ ಆಗಲಿದೆ ಎಂದು ತಿಳಿಸಿದರು. ಕಳೆದ ವರ್ಷ 1,15 ಕೋಟಿ ಸಾಲ ನೀಡಲಾಗಿತ್ತು, ಈ ಬಾರಿ ಅದನ್ನು ಇನ್ನೂ ಹೆಚ್ಚು ಮಾಡಲಾಗಿದೆ ಎಂದು ತಿಳಿಸಿದರು. ಸಾಲ ಪಡೆಯುವ ಪ್ರತಿಯೊಬ್ಬ ರೈತರಿಗೆ ಒಂದು ಲಕ್ಷದವರೆಗೆ ಒಂದು ರು. ಬಡ್ಡಿಯಂತೆ ಸಾಲ ನೀಡುತ್ತಿದ್ದು, ವಾಣಿಜ್ಯ ಬ್ಯಾಂಕ್‌ಗಳಿಗಿಂತ ಇದು ರೈತರಿಗೆ ಉಪಯೋಗವಾಗುತ್ತಿದ್ದು, ಕಾಲ ಕಾಲಕ್ಕೆ ಸರ್ಕಾರದಿಂದ ದೊರೆಯುವ ಇಂತಹ ಸವಲತ್ತುಗಳನ್ನು ಸದುಪಯೋಗಪಡಿಸಿಕೊಂಡು ಅಭಿವೃದ್ಧಿ ಹೊಂದುವಂತೆ ಹೇಳಿದರು.
ನಿರ್ದೇಶಕರಾದ ಸುಮಿತ್ರಮ್ಮ, ಕೆ. ಮಲ್ಲೇಶ್, ಸಯ್ಯದ್ ಅಬ್ಬಸ್, ಸಾದಿಕ್‌ಉಲ್ಲಾ, ಹುಚ್ಚಯ್ಯ, ಸಾವಿತ್ರಮ್ಮ, ತಾಪಂ ಸದಸ್ಯ ಆರ್.ಸಿ. ಚಂದ್ರು, ಹಿರಿಯ ಸದಸ್ಯರಾದ ಪುಟ್ಟೇಗೌಡ, ಕುಮಾರ, ನಾಗರಾಜು, ಶಿವದೇವ್, ಸುಮನ್‌ಕುಮಾರ್, ಪುಟ್ಟಸ್ವಾಮಿ ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

ದೆಹಲಿ: ಫ್ರೆಂಡ್​ಶಿಪ್ ನಿರಕಾರಿಸಿದ್ದಕ್ಕೆ 21 ವರ್ಷದ ಮಾಡೆಲ್'ನನ್ನು ಆಕೆಯ ಮನೆಗೆ ನುಗ್ಗಿ ಹತ್ಯೆಗೈದು ಜಿಮ್ ಟ್ರೇನರ್!

ಅಸಮಾಧಾನ ತಣಿಸಲು CM ಡಿಕೆಶಿ ಆಪ್ತ ಶಾಸಕ ಆಸೀಫ್ ಸೇಠ್‌ಗೆ ‘ಬುಡಾ’ ಅಧ್ಯಕ್ಷ ಪಟ್ಟ

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!