ತಾ. ಆಡಳಿತ ಭವನದಲ್ಲಿ ಆಚರಣೆ
ಪಿರಿಯಾಪಟ್ಟಣ: ಪಟ್ಟಣದಲ್ಲಿ ನೂತವಾಗಿ ನಿರ್ಮಿಸಿರುವ ತಾಲೂಕು ಆಡಳಿತ ಭವನದಲ್ಲಿ ಈ ಬಾರಿ ವಿಶೇಷವಾಗಿ ಸ್ವಾತಂತ್ರ್ಯ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ತಹಸೀಲ್ದಾರ್ ಎಂ.ಕೆ. ಸವಿತಾ ನೂತನವಾಗಿ ನಿರ್ಮಿಸಿರುವ ಧ್ವಜಸ್ತಂಭ ಉದ್ಘಾಟಿಸಿ ಧ್ವಜಾರೋಹಣ ನೆರವೇರಿಸಿದರು. ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳೂ ತಮ್ಮ ಸಿಬ್ಬಂದಿಯೊಂದಿಗೆ ಬಿಳಿ ಅಂಗಿ ಹಾಗೂ ನೀಲಿ ಬಣ್ಣದ ಪ್ಯಾಂಟ್ ತೊಟ್ಟು ಶಿಸ್ತಿನಿಂದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಹೆಚ್ಚು ಉತ್ಸಾಹದಿಂದ ಹಾಗೂ ಮೆರವಣಿಗೆಯಲ್ಲಿ ಪಾಲ್ಗೊಂಡರು.