ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಕಾವೇರಿತು ಮೇಲ್ಮನೆ ಉಪ ಚುನಾವಣೆ ಪ್ರಚಾರ

Rashmi Kasaragodu
Updated On : 17 Aug 2013, 12:46 pm

ಕ.ಪ್ರ. ವಾರ್ತೆ, ಪಿರಿಯಾಪಟ್ಟಣ, ಆ.16
ಪ್ರಸ್ತುತ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜಕಾರಣಿಗಳು ಒಳ್ಳೆಯ ಕೆಲಸ ಮಾಡುವುದು ಕಷ್ಟವಾಗುತ್ತಿದೆ ಎಂದು ಮೈಸೂರು ಮತ್ತು ಚಾಮರಾಜನಗರ ವಿಧಾನ ಪರಿಷತ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆರ್. ಧರ್ಮಸೇನ ಹೇಳಿದರು.
ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಬ್ಲಾಕ್ ಕಾಂಗ್ರೆಸ್ ಏರ್ಪಡಿಸಿದ್ದ ಮೈಸೂರು ಮತ್ತು ಚಾಮರಾಜನಗರ ವಿಧಾನ ಪರಿಷತ್ ಕ್ಷೇತ್ರದ ಉಪಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದು ಕಾರ್ಯನಿರ್ವಹಿಸುತ್ತಿದೆ. ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಪ್ರಾಮಾಣಿಕವಾಗಿ ದುಡಿದಿರುವ ತಮ್ಮನ್ನು ಪಕ್ಷ ಗುರುತಿಸಿ ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಯನ್ನಾಗಿಸಿದೆ. ಮತದಾರರು ರಾಜ್ಯದ ಹಿತದೃಷ್ಟಿಯಿಂದ ತಮಗೆ ಮತ ನೀಡಿ ಬೆಂಬಲಿಸುವಂತೆ ಮನವಿ ಮಾಡಿದರು.
ಶಾಸಕ ಕೆ. ವೆಂಕಟೇಶ್ ಮಾತನಾಡಿ, ಅಪವಿತ್ರ ಮೈತ್ರಿಯಿಂದಾಗಿ ಈ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿ ಹಾಗೂ ಕೆಜೆಪಿ ಬಣ್ಣ ಬಯಲಾಗಿದೆ. ಜೆಡಿಎಸ್ ಮುಖಂಡರು ಅಧಿಕಾರಕ್ಕೆ ಬರಲು ಏನು ಬೇಕಾದರೂ ಮಾಡುತ್ತಾರೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಧರ್ಮಸೇನ ಅವರು ಸಭ್ಯ ಹಾಗೂ ವಿವಾದಗಳಿಂದ ದೂರವಿರುವ ಅಭ್ಯರ್ಥಿಯಾಗಿದ್ದಾರೆ. ತಾಲೂಕಿನಲ್ಲಿ ಒಟ್ಟು 528 ಮತದಾರರಲ್ಲಿ 300ಕ್ಕೂ ಹೆಚ್ಚು ಮಂದಿ ಮತದಾರರು ಕಾಂಗ್ರೆಸ್ ಪಕ್ಷದ ಪರವಾಗಿದ್ದು, ಪಕ್ಷದ ಅಭ್ಯರ್ಥಿಯಾದ ಧರ್ಮಸೇನ ಅವರನ್ನು ಗೆಲ್ಲಿಸಿಕೊಡುವಂತೆ ಮನವಿ ಮಾಡಿದರು.
ಮಾಜಿ ಶಾಸಕ ಎಚ್.ಸಿ. ಬಸವರಾಜು, ಕೊಡಗು ಜಿಲ್ಲೆಯ ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷೆ ವೀಣಾ ಅಚ್ಚಯ್ಯ ಮಾತನಾಡಿದರು. ಜಿಪಂ ಸದಸ್ಯರಾದ ಮಂಜುಳಾ ರಾಜ್, ಕಾವೇರಿ ಶೇಖರ್, ತಾಪಂ ಸದಸ್ಯರಾದ ಬಿ.ವಿ. ಅನಿತಾ, ಸರಸ್ವತಿ, ಮಹದೇವ್, ಆರ್.ಸಿ. ಚಂದ್ರು, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಲಕ್ಷ್ಮಣೇಗೌಡ, ಎಪಿಎಂಸಿ ಅಧ್ಯಕ್ಷ ಹೊಲದಪ್ಪ, ಟಿಎಪಿಸಿಎಂಎಸ್ ಅಧ್ಯಕ್ಷ ಪುಟ್ಟರಾಜು, ಪಪಂ ಸದಸ್ಯರಾದ ಸಣ್ಣಪ್ಪ, ಅಜೀಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುಂಜಣ್ಣಕಾರ್ನಾಡ್, ಮಾನ್ಸೂನ್ಚಂದ್ರು, ಪ್ರಧಾನ ಕಾರ್ಯದರ್ಶಿಗಳಾದ ನಿಲಂಗಾಲ ಜಯಣ್ಣ, ವೆಂಕಟೇಶ್, ಯುವ ಘಟಕದ ಅಧ್ಯಕ್ಷ ಮೊಹಮದ್ ಶಫಿ, ಎಸ್ಸಿ ಘಟಕದ ಅಧ್ಯಕ್ಷ ಪಿ. ಮಹದೇವ್, ಮುಖಂಡರಾದ ರಾಮು, ಪಿ.ಎಂ. ಶಾಂತಪ್ಪ, ವಿಷಕಂಠಯ್ಯ, ಪಿ.ಪಿ. ಮಹದೇವ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement