ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ರೈತರಿಗೆ ಸಲಹೆ

Rashmi Kasaragodu
Updated On : 17 Aug 2013, 12:49 pm

ಮೈಸೂರು: ಜಿಲ್ಲೆಯಲ್ಲಿ ಆ.17 ರಿಂದ 20 ರವರೆಗೆ ಮೋಡ ಕವಿದ ವಾತಾವರಣವಿದ್ದು, ಚದುರಿದಂತೆ ಅಲ್ಲಲ್ಲಿ ತುಂತುರು ಮಳೆ ಬರುವ ಸಾಧ್ಯತೆ ಇದೆ ಎಂದು ನಾಗನಹಳ್ಳಿ ಸಾವಯವ ಕೃಷಿ ಸಂಶೋಧನಾ ಕೇಂದ್ರದ ಕ್ಷೇತ್ರಾಧೀಕ್ಷಕ ಡಾ.ಸಿ. ಗೋವಿಂದರಾಜು, ಸಹ ಸಂಶೋಧಕ ಎನ್. ನರೇಂದ್ರಬಾಬು ತಿಳಿಸಿದ್ದಾರೆ. ಬತ್ತದ ಸಸಿಮಡಿ ಹಂತದಲ್ಲಿ ಲಘು ಪೋಷಕಾಂಶದ ಕೊರತೆ ಎದುರಾದಲ್ಲಿ 5 ಗ್ರಾಂ ಪೆರಸ್ ಸಲ್ಫೇಟ್ ಹಾಗೂ ಥಿಪ್ಸ್ ರೋಗ ತಡೆಗಟ್ಟಲು 1.5 ಮಿ.ಲೀ. ರೋಗರ್ ಔಷಧವನ್ನು ಪ್ರತಿ ಲೀಟರ್ ನೀರಿನೊಂದಿಗೆ ಬೆರೆಸಿ ಸಿಂಪಡಿಸುವುದು. ಕಬ್ಬು ಬೆಳೆಗೆ ಗೊಣ್ಣೆಹುಳು ದಾಳಿ ಮಾಡಿದ್ದಲ್ಲಿ 2 ಮಿ.ಲೀ. ಕ್ಲೋರೋಪೈರಿಫಾಸ್ ಔಷಧವನ್ನು 1 ಲೀಟರ್ ನೀರಿನಲ್ಲಿ ಮಿಶ್ರಣ ಮಾಡಿ ಸಿಂಪರಣೆ ಮಾಡುವಂತೆ ರೈತರಿಗೆ ಸಲಹೆ ನೀಡಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments