ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಂದ ಶುಲ್ಕ ವಸೂಲಿ: ಪ್ರತಿಭಟನೆ

Rashmi Kasaragodu
Updated On : 18 Aug 2013, 1:02 am

ಮೈಸೂರು: ಮೈಸೂರು ವಿವಿ ಪ್ರವೇಶಾತಿ ಸಂದರ್ಭದಲ್ಲಿ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಂದ ಶುಲ್ಕ ಪಾವತಿಸುವಂತೆ ಒತ್ತಾಯಿಸುತ್ತಿರುವುದನ್ನು ಖಂಡಿಸಿ ಎಸ್ಸಿ, ಎಸ್ಟಿ ವಿದ್ಯಾರ್ಥಿ ಬಳಗದವರು ಮಾನಸಗಂಗೋತ್ರಿ ಸೆನೆಟ್ ಭವನದಲ್ಲಿರುವ ಆಡಳಿತಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟಿಸಿದರು.
2 ಲಕ್ಷಕ್ಕಿಂತ ಕಡಿಮೆ ಆದಾಯ ಇರುವ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳ ಎಲ್ಲ ತರಹದ ಶುಲ್ಕವನ್ನು ಸರ್ಕಾರದಿಂದ ಮರುಭರಿಕೆ ಆಗುವುದರಿಂದ ಸ್ನಾತಕ, ಸ್ನಾತಕೋತ್ತರ, ಡಿಪ್ಲೊಮಾ ಕೋರ್ಸ್ಗಳಿಗೆ ಪ್ರವೇಶಾತಿ ಸಮಯದಲ್ಲಿ ಸ್ಥಳದಲ್ಲೇ ಶುಲ್ಕ ಪಾವತಿಸುವಂತೆ ಒತ್ತಾಯಿಸಬಾರದು ಎಂದು ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಆದೇಶಿಸಿದ್ದಾರೆ. ಹೀಗಿದ್ದರೂ ಮೈಸೂರು ವಿವಿ ಶುಲ್ಕ ಪಾವತಿಸುವಂತೆ ಒತ್ತಾಯಿಸುತ್ತಿದೆ ಎಂದು ಆರೋಪಿಸಿದರು.
ಈ ವಿಚಾರವನ್ನು ಕುಲಪತಿ, ಕುಲಸಚಿವರ ಗಮನಕ್ಕೆ ತಂದಿದ್ದರೂ ಪ್ರಯೋಜನವಾಗಿಲ್ಲ. ಸರ್ಕಾರಿ ಆದೇಶ ಉಲ್ಲಂಘಿಸಿ ಶುಲ್ಕ ಪಾವತಿಗೆ ಒತ್ತಾಯಿಸಲಾಗುತ್ತಿದೆ. ಸರ್ಕಾರ ಕೊಡುವ ವಿದ್ಯಾರ್ಥಿಗಳ ಹಣವನ್ನು ವಿವಿ ಬಳಸಿಕೊಳ್ಳುವಂತೆ ಹಾಗೂ ವಿದ್ಯಾರ್ಥಿಗಳಿಂದ ಹಣ ವಸೂಲಿ ಮಾಡದಂತೆ ಸೂಚನೆ ನೀಡಬೇಕು ಎಂದು ಅವರು ಆಗ್ರಹಿಸಿದರು. ಹಾರೋಹಳ್ಳಿ ರವೀಂದ್ರ, ನವೀನ್ಕುಮಾರ್, ಟಿ. ಸೋಮೇಶ್, ರಮೇಶ್ ನೇತೃತ್ವ ವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement