ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಠಾಣೆಗಳಲ್ಲಿ ಕುಂದುಕೊರತೆ ಸಭೆ

Rashmi Kasaragodu
Updated On : 18 Aug 2013, 1:01 am

ಮೈಸೂರು: ನಗರದ ಎಲ್ಲ ಪೊಲೀಸ್ ಠಾಣೆಗಳಲ್ಲಿ ಆ.18ರ ಬೆಳಗ್ಗೆ 11.30 ರಿಂದ ಮಧ್ಯಾಹ್ನ 1.30 ರವರೆಗೆ ಸಾರ್ವಜನಿಕ ಕುಂದುಕೊರತೆ ಸಭೆ ನಡೆಯಲಿದೆ.
ಪೊಲೀಸ್ ಇನ್ಸ್ಪೆಕ್ಟರ್, ಇತರೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಕ್ರಮದಲ್ಲಿ ಹಾಜರಿರುತ್ತಾರೆ. ಸಾರ್ವಜನಿಕರು ತಮ್ಮ ವಾಸ ವಿಳಾಸದ ವ್ಯಾಪ್ತಿಗೆ ಬರುವ ಠಾಣೆಗಳಲ್ಲಿ ತಮ್ಮ ಅಹವಾಲುಗಳನ್ನು ನೀಡಬಹುದಾಗಿದೆ. ಅಲ್ಲದೆ, ಅಭಿಪ್ರಾಯ, ಮಾಹಿತಿಗಳನ್ನು ಕಾನೂನಿನ ಅಡಿಯಲ್ಲಿ ಸಹಕಾರಿಯಾಗುವಂತೆ ವಿಷಯಗಳನ್ನು ಚರ್ಚಿಸಬಹುದಾಗಿದೆ.  ಮಹಿಳೆಯು ಕೌಟುಂಬಿಕ ಹಿಂಸೆಯಾದಲ್ಲಿ ಕಾನೂನಿನಡಿಯಲ್ಲಿ ರಕ್ಷಣೆ ಪಡೆಯಲು ಸ್ಪಂದಿಸಿ ಪರಿಹಾರ ಕಂಡುಕೊಳ್ಳಬಹುದು. ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಪೊಲೀಸ್ ಆಯುಕ್ತ ಡಾ.ಎಂ.ಎ. ಸಲೀಂ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement