ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ನೀರಿಗಾಗಿ ಖಾಲಿ ಕೊಡ ಪ್ರದರ್ಶನ

Rashmi Kasaragodu
Updated On : 18 Aug 2013, 12:59 pm

ಮೈಸೂರು: ನಗರಪಾಲಿಕೆಯ 43 ಮತ್ತು 44ನೇ ವಾರ್ಡ್ಗಳಲ್ಲಿ ಸಮರ್ಪಕವಾಗಿ ಕುಡಿಯುವ ನೀರು ಸರಬರಾಜಿಗೆ ಆಗ್ರಹಿಸಿ ಕರ್ನಾಟಕ ಜನಪರ ಶಕ್ತಿ ವೇದಿಕೆಯ ನೇತೃತ್ವದಲ್ಲಿ ಬನ್ನಿಮಂಟಪದ ಬಳಿ ಶನಿವಾರ ಮಹಿಳೆಯರು ಖಾಲಿ ಕೊಡ ಪ್ರದರ್ಶಿಸಿ ಪ್ರತಿಭಟಿಸಿದರು.
ಬನ್ನಿಮಂಟಪ, ಹುಡ್ಕೋ ಬಡಾವಣೆ, ಕೆಎಸ್ಆರ್ಟಿಸಿ ಬಡಾವಣೆ, ಹನುಮಂತನಗರ ಸುತ್ತಮುತ್ತಲಿನ ಬಡಾವಣೆಗಳಿಗೆ ಸರಿಯಾಗಿ ನೀರು ಸರಬರಾಜು ಆಗುತ್ತಿಲ್ಲ. ಈ ಸಂಬಂಧ ನಗರಪಾಲಿಕೆ ಅಧಿಕಾರಿಗಳನ್ನು ವಿಚಾರಿಸಿದರೆ ಸಬೂಬು ಹೇಳುತ್ತಿದ್ದಾರೆ ಹೊರತು ನೀರು ಸರಬರಾಜು ಮಾಡುತ್ತಿಲ್ಲ ಎಂದು ಅವರು ಆರೋಪಿಸಿದರು.
ನೀರು ಸರಬಾಜು ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಬೇಕು. ನಿರ್ಲಕ್ಷ್ಯವಹಿಸಿರುವ ಅಧಿಕಾರಿಗಳಿಗೆ ಎಚ್ಚರಿಕೆ ನೀಡಬೇಕು ಎಂದು ಅವರು ಒತ್ತಾಯಿಸಿದರು. ವೇದಿಕೆಯ ರಾಜ್ಯಾಧ್ಯಕ್ಷೆ ಆರ್. ಮಧುಮತಿ ನೇತೃತ್ವ ವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement