ಮೈತ್ರಿಕೂಟದ ಅಭ್ಯರ್ಥಿ ಸೋಲಿಸಲು ಪ್ರಸಾದ್ ಕರೆ
ಕ.ಪ್ರ.ವಾರ್ತೆ ನಂಜನಗೂಡು ಆ. 17
ವಿಧಾನಪರಿಷತ್ತಿನ ಉಪ ಚುನಾವಣೆಯಲ್ಲಿ ಕೆಜೆಪಿ, ಬಿಜೆಪಿ, ಜೆಡಿಎಸ್ ಮೈತ್ರಿಕೂಟದ ಕೆಜೆಪಿ ಹರಾಜಿನ ಅಭ್ಯರ್ಥಿ ಯು.ಎಸ್. ಶೇಖರ್ ಅವರನ್ನು ಸೋಲಿಸುವಂತೆ ಕಂದಾಯ ಸಚಿವ ವಿ.ಶ್ರೀನಿವಾಸಪ್ರಸಾದ್ ಕರೆ ನೀಡಿದರು.
ಥಾಮಸ್ ಲೇಔಟ್ನಲ್ಲಿರುವ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಶನಿವಾರ ವಿಧಾನಪರಿಷತ್ ಉಪಚುನಾವಣೆ ಅಂಗವಾಗಿ ನಡೆದ ಚುನಾಯಿತ ಪ್ರತಿನಿಧಿಗಳ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ವಿಧಾನಪರಿಷತ್ ಸದಸ್ಯತ್ವಕ್ಕೆ ತನ್ನದೇ ಆದ ಗೌರವ ಹೊಂದಿದ್ದು, ಅದಕ್ಕೆ ಧಕ್ಕೆಯಾಗುವ ರೀತಿಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಕೆಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಖಾಸಗಿ ಹೊಟೇಲ್ ಒಂದರಲ್ಲಿ ಪಕ್ಷದ ಅಭ್ಯರ್ಥಿಯ ಆಯ್ಕೆಯಲ್ಲಿ ಹರಾಜು ನಡೆಸಿ, ಆಯ್ಕೆ ಮಾಡಿ ಎಂಡಿಎ ನಿವೇಶನವು ಸಹ ಇಷ್ಟು ಸುಲಲಿತವಾಗಿ ನಡೆಯದ ಹಾಗೆ ಟಿಕೆಟ್ ಆಯ್ಕೆ ನಡೆದಿದೆ ಎಂದು ವ್ಯಂಗ್ಯವಾಡಿದರು.
ಚುನಾಯಿತ ಪ್ರತಿನಿಧಿಗಳು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ, ದೇಶ ಹಾಗೂ ರಾಷ್ಟ್ರದ ಹಿತದೃಷ್ಟಿಯಿಂದ ಪ್ರಜಾತಂತ್ರ ವ್ಯವಸ್ಥೆಯ ಗೌರವ ಕಾಪಾಡಲು ಕಾಂಗ್ರೆಸ್ ಅಭ್ಯರ್ಥಿ ಆರ್. ಧರ್ಮಸೇನ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದರು.
ಸಂಸದ ಆರ್. ಧ್ರುವನಾರಾಯಣ್, ಕಾಂಗ್ರೆಸ್ ಅಭ್ಯರ್ಥಿ ಆರ್.ಧರ್ಮಸೇನ, ರಾಜ್ಯ ಯುವ ಕಾಂಗ್ರೆಸ್ ಮುಖಂಡ ಬಿ.ಹರ್ಷವರ್ಧನ್, ಬ್ಲಾಕ್ ಅಧ್ಯಕ್ಷರಾದ ಪಿ.ಎಸ್. ಸುಬ್ಬಣ್ಣ, ಬಿ.ಎಸ್. ಮಹದೇವಪ್ಪ, ಜಿಪಂ ಸದಸ್ಯ ಕೆ. ಮಾರುತಿ, ಕೆಪಿಸಿಸಿ ಸದಸ್ಯರಾದ ಅಕ್ಬರ್ ಅಲಿ, ಬಸವರಾಜು ಇದ್ದರು.