ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಗರಿಗೆದರಿದ ಲೋಕಸಭಾ ಉಪ ಕದನ

Vishwanath S
Updated On : 19 Aug 2013, 12:13 pm

ಕ.ಪ್ರ.ವಾರ್ತೆ ,  ಕೆ.ಆರ್. ನಗರ ,  ಆ. 18
ರಾಜ್ಯದಲ್ಲಿ ಉಪ ಚುನಾವಣೆ ಬಂದು ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟಾಗಲು ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಿ.ಎಸ್. ಪುಟ್ಟರಾಜು ಆೋಪಿಸಿದರು.
ತಾಲೂಕಿನ ಹಂಪಾಪುರ ಗ್ರಾಮದಲ್ಲಿ ಭಾನುವಾರ ರೋಡ್ ಶೋ ನಡೆಸಿ ಮತಯಾಚಿಸಿ ಮಾತನಾಡಿದ ಅವರು, ಉಪಚುನಾವಣೆ ನೆಪದಲ್ಲಿ ಜೆಡಿಎಸ್ ಶಕ್ತಿ ಕುಗ್ಗಿಸಿ ಮುಂಬರುವ ಸಾರ್ವತ್ರಿಕ ಲೋಕಸಭಾ ಚುನಾವಣೆ ವೇಳೆಗೆ ತನ್ನ ಅಧಿಪತ್ಯ ಸ್ಥಾಪಿಸಲು ಕಾಂಗ್ರೆಸ್ ಹೊರಟಿದೆ. ಕ್ಷೇತ್ರದಾದ್ಯಂತ ಜೆಡಿಎಸ್ ಪರ ಅಲೆ ಇದ್ದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮತ್ತು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ನಾಯಕತ್ವಕ್ಕೆ ಮತದಾರರು ಮನ್ನಣೆ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಶಾಸಕ ಸಾ.ರಾ. ಮಹೇಶ್ ಮಾತನಾಡಿ, ಮಂಡ್ಯ ಮತ್ತು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳನ್ನು ಜೆಡಿಎಸ್ ಮತ್ತೆ ತನ್ನ ತೆಕ್ಕೆಗೆ ತೆಗೆದುಕೊಳ್ಳಲಿದೆ. ಮತದಾರರು ಪಕ್ಷದ ಕೈ ಹಿಡಿಯಲಿದ್ದು ಅನಗತ್ಯ ಚುನಾವಣೆಗೆ ದಾರಿ ಮಾಡಿರುವ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಮಾರ್ಮಿಕವಾಗಿ ನುಡಿದರು. ಶಾಸಕ ಎಸ್. ಚಿಕ್ಕಮಾದು, ಮಾಜಿ ಶಾಸಕ ಕೆ.ಟಿ. ಶ್ರೀಕಂಠೇಗೌಡ, ಚಿತ್ರನಟ ಎಸ್. ನಾರಾಯಣ್, ಜಿಪಂ ಮಾಜಿ ಸದಸ್ಯ ಎಂ.ಟಿ.ಕುಮಾರ್, ವಕ್ತಾರ ಕೆ.ಎಲ್. ರಮೇಶ್, ಮುಖಂಡರಾದ ಎಚ್.ಸಿ. ಕುಮಾರ್, ಎಚ್.ಎಂ. ಯೋಗೇಂದ್ರ, ಮಂಜುನಾಥ್, ಚೀರನಹಳ್ಳಿ ಶ್ರೀನಿವಾಸ್, ಗೋಪಾಲಗೌಡ, ಕೆ.ಎನ್. ರಾಜೇಶ್, ರವಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement