ಮಹನೀಯರ ಜೀವನ ಸಾಧನೆ ದಾಖಲಾಗಲಿ: ಜಿಟಿಡಿ
ಮೈಸೂರು: ಸಮಾಜದ ಉದ್ಧಾರಕ್ಕೆ ಶ್ರಮಿಸಿರುವ ಮಹನೀಯರ ಜೀವನ ಸಾಧನೆ ದಾಖಲಾಗಬೇಕು ಎಂದು ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ. ದೇವೇಗೌಡ ಹೇಳಿದರು.
ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯು ಕಲಾಮಂದಿರದಲ್ಲಿ ಮಂಗಳವಾರ ಏರ್ಪಡಿಸಿದ್ದ ನಾಡಪ್ರಭು ಕೆಂಪೇಗೌಡ, ಕೆ.ಎಚ್. ರಾಮಯ್ಯ ಜನ್ಮದಿನ, ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನಾಡಪ್ರಭು ಕೆಂಪೇಗೌಡ ಕುರಿತು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ನೀ. ಗಿರಿಗೌಡ ಹಾಗೂ ಕೆ.ಎಚ್. ರಾಮಯ್ಯ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿವೃತ್ತ ಸಹಾಯಕ ನಿದೇರ್ಶಕ ಸಿ. ದಾಸೇಗೌಡ ಮಾತನಾಡಿದರು.
ವಿವಿಧ ಕ್ಷೇತ್ರಗಳ ಸಾಧಕರಾದ ಕೆ. ಉಮಾಶಂಕರ್, ಮಂಜುಳಾ ಮಂಜುನಾಥ್, ಕೆ.ಟಿ. ಕೃಷ್ಣಪ್ಪ, ಕೆ.ಎಂ. ಪುಷ್ಪಲತಾ, ಎಚ್.ಕೆ. ರಮೇಶ್, ಮೆಲ್ಲಹಳ್ಳಿ ಮಹದೇವಸ್ವಾಮಿ, ಮಡ್ಡೀಕೆರೆ ಗೋಪಾಲ್ ಹಾಗೂ ಕೆ.ಎಚ್. ರಾಮಯ್ಯ ಕುಟುಂಬದ ಸದಸ್ಯರನ್ನು ಸನ್ಮಾನಿಸಲಾಯಿತು.
ಆದಿಚುಂಚನಗಿರಿ ಶಾಖಾ ಮಠದ ಸೋಮನಾಥ ಸ್ವಾಮೀಜಿ, ಮಾಯಸಂದ್ರ ಶಾಖಾ ಮಠದ ಶಿವಕುಮಾರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಶಾಸಕ ವಾಸು, ಕಲ್ಪವೃಕ್ಷ ಟ್ರಸ್ಟ್ ಅಧ್ಯಕ್ಷ ಡಾ.ಎಚ್.ಬಿ. ರಾಜಶೇಖರ್ ಸಾಧಕರನ್ನು ಗೌರವಿಸಿದರು. ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಚ್.ಕೆ. ರಾಮು, ಆರೋಗ್ಯ ಯೋಗ ಸಂಸ್ಥೆ ಅಧ್ಯಕ್ಷ ಡಾ. ಎಸ್. ಪಿ. ಯೋಗಣ್ಣ ಮುಖ್ಯ ಅತಿಥಿಗಳಾಗಿದ್ದರು. ವೇದಿಕೆ ಅಧ್ಯಕ್ಷೆ ಯಮುನಾ, ಉಪಾಧ್ಯಕ್ಷ ಲಕ್ಷ್ಮೇಗೌಡ, ಸಂಘಟನಾ ಕಾರ್ಯದರ್ಶಿ ಸೀಗಳ್ಳಿ ದಶರಥ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ. ಜೆ.ಜಿ. ವಿಶ್ವನಾಥ್ ಇದ್ದರು.