ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

'ಕ್ರೀಡಾಪಟುಗಳ ಜವಾಬ್ದಾರಿ ಶಿಕ್ಷಕರ ಹೆಗಲಿಗೆ'

Vishwanath S
Updated On : 26 Aug 2013, 12:29 pm

ಕ.ಪ್ರ.ವಾರ್ತೆ ,  ಹುಣಸೂರು ,  ಆ. 25
ಹುಣಸೂರಿನಲ್ಲಿ ಆ. 26 ರಿಂದ 28 ರವರೆಗೆ ನಡೆಯುವ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಕ್ರೀಡಾಪಟುಗಳನ್ನು ಕರೆತರುವ ಹಾಗೂ ವಾಪಸ್ ಕಳುಹಿಸುವ ಸಂಪೂರ್ಣ ಜವಾಬ್ದಾರಿಯನ್ನು ಆಯಾ ಶಾಲೆಯ ಶಿಕ್ಷಕರದ್ದು ಎಂದು ಬಿಇಒ ರಾಜಶೇಖರ್ ತಿಳಿಸಿದ್ದಾರೆ. ಶಾಲೆಯ ಕ್ರೀಡಾಪಟುಗಳೊಂದಿಗೆ ಒಬ್ಬ ಪುರುಷ ಮತ್ತು ಒಬ್ಬ ಮಹಿಳಾ ಶಿಕ್ಷಕರು ಕ್ರೀಡಾಪಟುಗಳನ್ನು ಕರೆದುಕೊಂಡು ಹೋಗಿ ಕ್ರೀಡಾಕೂಟ ಮುಗಿದ ನಂತರ ವಿದ್ಯಾರ್ಥಿಗಳನ್ನು ಅವರ ಮನೆಗಳಿಗೆ ಕಳುಹಿಸುವವರೆಗೆ ಇದ್ದು ಯಾವುದೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಕ್ರೀಡಾಪಟುಗಳನ್ನು ಅಸುರಕ್ಷಿತ ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿಗಳಲ್ಲಿ ಕರೆತರಬಾರದು. ಕ್ರೀಡಾಕೂಟ ನಡೆಯುವ ದಿನಗಳಲ್ಲಿ ಕ್ರೀಡಾಪಟುಗಳನ್ನು ಹೊರತುಪಡಿಸಿ ಶಾಲೆಯ ಇತರೆ ವಿದ್ಯಾರ್ಥಿಗಳು ಭಾಗವಹಿಸದಂತೆ ನೋಡಿಕೊಳ್ಳಬೇಕು. ಈ ಸಂಬಂಧ ಯಾವುದೆ ಲೋಪವಾದಲ್ಲಿ ಮುಖ್ಯ ಶಿಕ್ಷಕರು ಹಾಗೂ ಸಂಬಂಧಿಸಿದ ತಂಡದ ಮೇಲ್ವಿಚಾರಕರನ್ನು ಹೊಣೆಗಾರರಾಗುತ್ತಾರೆ ಎಂದು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement