ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಚಿನ್ನ ಗಿರವಿ ಬಗ್ಗೆ ದಾಖಲೆ ಸಂಗ್ರಹಿಸಲು ಸೂಚನೆ

Vishwanath S
Updated On : 26 Aug 2013, 12:28 pm

ಕ.ಪ್ರ.ವಾರ್ತೆ ,  ಮೈಸೂರು ,  ಆ. 25
ಚಿನ್ನಾಭರಣ ಮಾರಾಟ ಮಾಡುವವರು, ಗಿರವಿ ಇರಿಸುವ ವ್ಯಕ್ತಿಗಳ ಬಗ್ಗೆ ಸೂಕ್ತ ದಾಖಲೆಗಳನ್ನು ಸಂಗ್ರಹಿಸಬೇಕು ಹಾಗೂ ಅನುಮಾನಸ್ಪದ ವ್ಯಕ್ತಿಗಳು, ವಸ್ತುಗಳ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡುವಂತೆ ನಗರ ಪೊಲೀಸ್ ಆಯುಕ್ತ ಡಾ.ಎಂ.ಎ. ಸಲೀಂ ಸೂಚಿಸಿದರು.
ಪೊಲೀಸ್ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ಶನಿವಾರ ಸಂಜೆ ನಡೆದ ಮೈಸೂರು ನಗರದ ಜ್ಯುವೇಲ್ಲರಿ ಅಸೋಸಿಯೇಷನ್, ಪಾನ್ ಬ್ರೋಕರ್ಸ್ ಅಸೋಸಿಯೇಷನ್, ಚಿನ್ನ ಬೆಳ್ಳಿ ಕೆಲಸಗಾರರ ಸಂಘ ಮತ್ತು ಚಿನ್ನ, ಬೆಳ್ಳಿ ಕರಗಿಸುವ ಬ್ಯಾಟರಿ ಷಾಪ್ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ಈ ವಿಚಾರ ತಿಳಿಸಿದರು.
ಸ್ವತ್ತಿನ ಪ್ರಕರಣಗಳ ಮಾಲು ಮತ್ತು ಆರೋಪಿಗಳ ಪತ್ತೆಗೆ ಸಹಕರಿಸಬೇಕು. ಸ್ವತ್ತಿನ ಪ್ರಕರಣಗಳಲ್ಲಿ ಕಳವು ವಸ್ತುಗಳ ವಶಪಡಿಸಿಕೊಳ್ಳುವಲ್ಲಿ ಉಂಟಾಗುವ ಸಾಧಕ- ಬಾಧಕಗಳ ಬಗ್ಗೆ ಚರ್ಚಿಸಲಾಯಿತು. ಇದೇ ವೇಳೆ ಕಳವು ಮಾಲು ಸ್ವೀಕರಿಸುವವರೆಗೆ ಕಾನೂನಿನ ಅಡಿಯಲ್ಲಿ ಸಹಕಾರಿಯಾಗುವಂತೆ ವಿಷಯಗಳನ್ನು ಚರ್ಚಿಸಿ ಕಾನೂನಿನಡಿಯಲ್ಲಿ ಜರುಗಿಸಬಹುದಾದ ಕ್ರಮಗಳ ಬಗ್ಗೆ ತಿಳಿವಳಿಕೆ ನೀಡಲಾಯಿತು.
ಸಿಸಿಟಿವಿ ಅಳವಡಿಸಿಕೊಳ್ಳಲು ಹಾಗೂ ಚಿನ್ನದ ವಸ್ತುಗಳನ್ನು ಮಾರಾಟ, ಗಿರಿವಿ ಇಡುವ ವ್ಯಕ್ತಿಗಳ ಬಗ್ಗೆ ಸೂಕ್ತ ದಾಖಲಾತಿ ಸಂಗ್ರಹಿಸಿಕೊಳ್ಳಬೇಕು. ಅನುಮಾನಸ್ಪದ ವ್ಯಕ್ತಿಗಳ ಅಥವಾ ವಸ್ತುಗಳ ಬಗ್ಗೆ ಸ್ಥಳೀಯ ಪೊಲೀಸರಿಗೆ ಕೂಡಲೇ ಮಾಹಿತಿ ನೀಡಬೇಕು ಎಂದು ಆಯುಕ್ತರು ಹೇಳಿದರು.
ಡಿಸಿಪಿಗಳಾದ ಎ.ಎನ್. ರಾಜಣ್ಣ, ಎಂ.ಎಂ. ಮಹದೇವಯ್ಯ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement