ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಮೇಯರ್ ಸ್ಥಾನಕ್ಕೆ ಹಸೀನಾ ತಾಜ್ ಆಯ್ಕೆಗೆ ಒತ್ತಾಯ

Vishwanath S
Updated On : 26 Aug 2013, 12:28 pm

ಕ.ಪ್ರ.ವಾರ್ತೆ ,  ಮೈಸೂರು ,  ಆ. 25
ನಗರಪಾಲಿಕೆ ವಾರ್ಡ್ ನಂ. 46ರಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿ ಗೆದ್ದಿರುವ ಹಸೀನಾ ತಾಜ್ ಅವರನ್ನು ಮೇಯರ್ ಸ್ಥಾನಕ್ಕೆ ಆಯ್ಕೆ ಮಾಡಬೇಕು ಎಂದು ಜೆಡಿಎಸ್ ಅಲ್ಪಸಂಖ್ಯಾತ ಮುಖಂಡರು ಒತ್ತಾಯಿಸಿದ್ದಾರೆ.
ನಗರಪಾಲಿಕೆ ಮೇಯರ್ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮತ್ತು ಉಪ ಮೇಯರ್ ಸ್ಥಾನಕ್ಕೆ ಎಸ್ಸಿ ಮೀಸಲಾತಿ ಇದೆ. ಹಸೀನಾ ತಾಜ್ ಅವರನ್ನು ಪಾಲಿಕೆ ಸದಸ್ಯರು, ಶಾಸಕರು ಮೇಯರ್ ಸ್ಥಾನಕ್ಕೆ ಆಯ್ಕೆ ಮಾಡಿ, ಈ ಬಾರಿ ಮುಸ್ಲಿಂ ಮಹಿಳೆಗೆ ಅವಕಾಶ ಮಾಡಿಕೊಡಬೇಕು ಎಂದು ಜೆಡಿಎಸ್ ಎನ್.ಆರ್. ಕ್ಷೇತ್ರದ ಅಧ್ಯಕ್ಷ ಮೊಹಮ್ಮದ್ ಷರೀಫ್ ಆಗ್ರಹಿಸಿದರು.
ಅಜೀಜುಲ್ಲಾ ಅವರು ಪಕ್ಷದಲ್ಲಿ ಗಣನೀಯ ಸೇವೆ ಸಲ್ಲಿಸುತ್ತಾ ಬಂದಿದ್ದು, ಅವರ ಅತ್ತಿಗೆಯಾದ ಹಸೀನಾ ತಾಜ್ ಅವರಿಗೆ ಮೇಯರ್ ಸ್ಥಾನಕ್ಕೆ ಆಯ್ಕೆ ಮಾಡಬೇಕು ಎಂದು ಕೋರಿದರು.
ಜೆಡಿಎಸ್ ಅಲ್ಪಸಂಖ್ಯಾತರ ವಿಭಾಗದ ನಗರ ಮಹಾ ಪ್ರಧಾನ ಕಾರ್ಯದರ್ಶಿ ಅಪ್ಸರ್ ಅಹಮ್ಮದ್, ಮುಖಂಡರಾದ ಶೇಖ್ ಫಿರ್ ಅಹಮದ್, ಪಾಷ, ವಿಜಯಕುಮಾರ್, ಜಾನ್ ಬಾಸ್ಕೋ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement