ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ
ಕ.ಪ್ರ.ವಾರ್ತೆ , ಹುಣಸೂರು , ಆ. 25
ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ತಮ್ಮಲ್ಲಿ ಅಡಗಿರುವ ಪ್ರತಿಭೆಯನ್ನು ಹೊರ ಹಾಕಬೇಕು ಎಂದು ಪ್ರಾಂಶುಪಾಲ ಪ್ರೊ. ಲೋಹಿತಾಶ್ವ ಅಭಿಪ್ರಾಯಪಟ್ಟರು.
ಪಟ್ಟಣದ ಡಿ. ದೇವರಾಜ ಅರಸು ಪ್ರಥಮದರ್ಜೆ ಕಾಲೇಜಿನಲ್ಲಿ ನಡೆದ ಪ್ರತಿಭಾನೇಷ್ವಣ ಕಾರ್ಯಕ್ರಮದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಾಲೇಜಿನಲ್ಲಿ ಹಲವಾರು ಪ್ರತಿಭಾನ್ವಿತ ವಿದ್ಯಾರ್ಥಿಗಳಿದ್ದಾರೆ. ಈಗಾಗಲೆ ತಮ್ಮಲ್ಲಿನ ಪ್ರತಿಭೆ ಹೊರಹಾಕುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ ಎಂದರು.
ಸಾಂಸ್ಕೃತಿಕ ವೇದಿಕೆ ಸಂಚಾಲಕ ವೆಂಕಟೇಶಯ್ಯ ಮಾತನಾಡಿ, ಪ್ರತಿಯೊಬ್ಬರಲ್ಲಿಯೂ ಒಂದಿಲ್ಲೊಂದು ಪ್ರತಿಭೆ ಇರುತ್ತದೆ. ಅದನ್ನು ಹೊರ ತೆಗೆಯುವ ಇಂತಹ ಸ್ವರ್ಧಾತ್ಮಕ, ಸಾಂಸ್ಕೃತಿಕ ಸ್ಪರ್ಧೆಗಳು ವಿದ್ಯಾರ್ಥಿಗಳಿಗೆ ಸಂಜೀವಿನಿಯಾಗಿದೆ. ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸುವ ಮೂಲಕ ಪ್ರತಿಭೆ ಹೊರಹೊಮ್ಮಿಸಬೇಕು ಎಂದರು.
ಸಾಂಸ್ಕೃತಿಕ ವೇದಿಕೆ ಪದಾಧಿಕಾರಿಗಳಾದ ಗೋವಿಂದೇಗೌಡ, ರಮ್ಯಾ ಮಾತನಾಡಿದರು. ಕಾರ್ಯಕ್ರಮದಲ್ಲಿ ಕೆಲ ವಿದ್ಯಾರ್ಥಿಗಳು ಭಾವಗೀತೆ, ಜಾನಪದ ಗೀತೆ ಮತ್ತು ಸಮೂಹ ಗೀತೆ ಹಾಡಿದರು.