ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಚಾಮುಂಡಿ ಬೆಟ್ಟ ಭೂ ಒತ್ತುವರಿ: ತನಿಖೆ

Srinivasa Murthy VN
Updated On : 26 Aug 2013, 11:55 am

ಮೈಸೂರು: ಚಾಮುಂಡಿ ಬೆಟ್ಟದ ಸುತ್ತಲಿನ ಭೂ ಒತ್ತುವರಿಗೆ ಸಂಬಂಧಿಸಿದಂತೆ ನಿವೃತ್ತ ಐಎಎಸ್ ಅಧಿಕಾರಿ ನೇತೃತ್ವದಲ್ಲಿ ತನಿಖೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಕಂದಾಯ ಸಚಿವ ವಿ. ಶ್ರೀನಿವಾಸಪ್ರಸಾದ್ ಹೇಳಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ರಾಜ್ಯ ಸರ್ಕಾರದ 'ನೂರು ದಿನ ನೂರಾರು ನಿರ್ಣಯ' ಸಂಚಿಕೆ ಬಿಡುಗಡೆಗೊಳಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ವಿಧಾನ ಪರಿಷತ್ ಸದಸ್ಯ ಗೋ. ಮಧುಸೂದನ್ ಅವರು ಚಾಮುಂಡಿ ಬೆಟ್ಟದ ತಪ್ಪಲಿನ ಕುರುಬಾರಹಳ್ಳಿ ಸುತ್ತಲಿನ ಜಮೀನು ಒತ್ತುವರಿಗೆ ಸಂಬಂಧಿಸಿದಂತೆ ಏಕಾಂಗಿಯಾಗಿ ಹೋರಾಡಿದ್ದರು. ಈ ಬಗ್ಗೆ ಮುಖ್ಯಮಂತ್ರಿಯೊಂದಿಗೆ ಮಾತುಕತೆ ನಡೆಸಿದ್ದು, ತನಿಖೆ ನಡೆಸಲಾಗುವುದು ಎಂದು ಭರವಸೆ ನೀಡಿದರು. ರಾಜ್ಯದಲ್ಲಿ ಸರ್ಕಾರಿ ಮತ್ತು ಅರಣ್ಯ ಪ್ರದೇಶದಲ್ಲಿ ಒತ್ತುವರಿಯಾದ 12 ಲಕ್ಷ ಎಕರೆ ಜಮೀನನ್ನು ವಶಪಡಿಸಿಕೊಳ್ಳುವ ಸಂಬಂಧವಾಗಿ ತೀರ್ಮಾನಿಸಲಾಗುವುದು. ಪ.ಜಾತಿಗೆ ಸರ್ಕಾರದಿಂದ ನೀಡಲಾದ ಜಮೀನು ಮಾರಾಟಕ್ಕೆ ಸಂಬಂಧಿಸಿದಂತೆ ಕೆಲವು ತಿದ್ದುಪಡಿ ತರಲು ತೀರ್ಮಾನಿಸಲಾಗಿದೆ. ಪ.ಜಾತಿಯವರಿಗೆ ಜಮೀನು ನೀಡಿದ 10 ರಿಂದ 15 ವರ್ಷಗಳ ಬಳಿಕ ಮಾರಲು ಅವಕಾಶ ಕಲ್ಪಿಸಲಾಗುವುದು ಎಂದರು.
ದಸರಾಗೆ ಸಕಲ ಸಿದ್ಧತೆ: ನಾಡಹಬ್ಬ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆದ ಉನ್ನತಾಧಿಕಾರಿ ಸಮಿತಿ ಸಭೆಯಲ್ಲಿ ಹಲವು ತೀರ್ಮಾನ ಕೈಗೊಳ್ಳಲಾಗಿದೆ. ದಸರಾಗೆ 10 ಕೋಟಿ ಬಿಡುಗಡೆ ಮಾಡಲಾಗುತ್ತಿದೆ. ನಗರದ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದ್ದು, ಸರ್ಕಾರದ ಹಣ ದುರುಪಯೋಗ ಆಗದಂತೆ ನೋಡಿಕೊಳ್ಳಲಾಗುತ್ತಿದೆ. ಆ.28ಕ್ಕೆ ವೀರನಹೊಸಳ್ಳಿಯಿಂದ ಗಜಪಯಣ ಆರಂಭವಾಗುವ ಹಿನ್ನೆಲೆಯಲ್ಲಿ ಆ. 27ರಂದು ದಸರಾ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement