ಆರ್ಡಿಎಂಎಸ್ ಪ್ರತಿಭಟನೆ
ಕ.ಪ್ರ.ವಾರ್ತೆ ಮೈಸೂರು ಆ. 27
ಮಹಿಳೆಯರ ಮೇಲಿನ ಅತ್ಯಾಚಾರ ಖಂಡಿಸಿ ರಾಜ್ಯ ದ್ರಾವಿಡ ಮಹಾಸಭಾವು ಆ. 29ರ ಮಧ್ಯಾಹ್ನ 12ಕ್ಕೆ ನಗರದ ಗಾಂಧಿ ವೃತ್ತದ ಬಳಿ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಿದೆ ಎಂದು ರಾಜ್ಯಾಧ್ಯಕ್ಷ ಗೋವಿಂದರಾಜು ತಿಳಿಸಿದ್ದಾರೆ.
ತಾಲೂಕಿನ ಬೆಲವತ್ತ ಗ್ರಾಮದ ಸರ್ವೇ ನಂ. 93,16 ಪಿಟಿಸಿಎಲ್ ಪ್ರಕರಣದ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ದಲಿತ ಹಿಂದುಳಿದ ಅಲ್ಪಸಂಖ್ಯಾತರ ಸಮನ್ವಯ ವೇದಿಕೆಯು ಆ. 29ರ ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಲಿದೆ.
ಕಾರ್ಯಾಗಾರ
ಮೈಸೂರು: ದಕ್ಷಿಣ ವಲಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘವು ಆ. 29ರ ಬೆಳಗ್ಗೆ 10ಕ್ಕೆ ಕುವೆಂಪುನಗರದ ಕಾವೇರಿ ವಿದ್ಯಾ ಸಂಸ್ಥೆಯ ಸಭಾಂಗಣದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಪ್ರಯುಕ್ತ ಒಂದು ದಿನದ ಕಾರ್ಯಾಗಾರ ಆಯೋಜಿಸಿದೆ.
ವಿದ್ಯಾವರ್ಧಕ ಪ್ರಥಮ ದರ್ಜೆ ಕಾಲೇಜು ಹಾಗೂ ಮೈಸೂರು ವಿವಿ ಪದವಿ ಕಾಲೇಜುಗಳ ಹಿಂದಿ ಅಧ್ಯಾಪಕರ ಸಂಘವು ಆ. 29ರ ಬೆಳಗ್ಗೆ 10ಕ್ಕೆ ಕಾಲೇಜು ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ ಏರ್ಪಡಿಸಿದ್ದು, ಎಸ್.ಎನ್. ಲಕ್ಷ್ಮೀನಾರಾಯಣ ಉದ್ಘಾಟಿಸುವರು.