ಬಿಜೆಪಿಗೆ ನೇಮಕ
ಮೈಸೂರು: ಭಾರತೀಯ ಜನತಾ ಪಕ್ಷದ ಮೈಸೂರು ನಗರ ಘಟಕದ ಉಪಾಧ್ಯಕ್ಷರಾಗಿ ಸಿದ್ದಾರ್ಥ ಬಡಾವಣೆಯ ಕೆ. ಆಶಾ ನಾಗಭೂಷಣ ಸಿಂಗ್ ಅವರನ್ನು ನಗರ ಅಧ್ಯಕ್ಷ ಮಾರುತಿರಾವ್ ಪವಾರ್ ನೇಮಕ ಮಾಡಿದ್ದಾರೆ. ಎನ್.ಆರ್. ಕ್ಷೇತ್ರದ ಹಿಂದುಳಿದ ವರ್ಗ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಎನ್. ಪ್ರದೀಪ್ ಸಿಂಗ್ ಮತ್ತು 62ನೇ ವಾರ್ಡ್ ಪ್ರಧಾನ ಕಾರ್ಯದರ್ಶಿಯಾಗಿ ವೆಂಕಟೇಶ್ ಅವರನ್ನು ಎನ್.ಆರ್. ಕ್ಷೇತ್ರದ ಅಧ್ಯಕ್ಷ ಬಿ. ಆನಂದ್ ನೇಮಕ ಮಾಡಿದ್ದಾರೆ.
ಬುದ್ಧಿಶಕ್ತಿ ಬೆಳವಣಿಗೆಗೆ ಪೌಷ್ಟಿಕ ಆಹಾರ ಅಗತ್ಯ: ಮಂಜುನಾಥ್
ಮೈಸೂರು: ಮಕ್ಕಳ ಬುದ್ಧಿಶಕ್ತಿ ಬೆಳವಣಿಗೆಗೆ ಪೌಷ್ಟಿಕ ಆಹಾರ ಸೇವನೆ ಅಗತ್ಯವಾಗಿದೆ ಎಂದು ಪಾಲಿಕೆ ಸದಸ್ಯ ಬಿ.ವಿ. ಮಂಜುನಾಥ್ ಅಭಿಪ್ರಾಯಪಟ್ಟರು. ನಗರದ ತ್ಯಾಗರಾಜ ರಸ್ತೆಯಲ್ಲಿರುವ ಅಕ್ಕನ ಬಳಗ ಮಹಾದೇವಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಏರ್ಪಡಿಸಿದ್ದ ಹಾಲು ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳಲ್ಲಿ ಪೌಷ್ಟಿಕತೆ ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಕ್ಷೀರಭಾಗ್ಯ ಯೋಜನೆ ಜಾರಿಗೆ ತಂದಿದೆ. ಪ್ರತಿಯೊಬ್ಬರು ಇದರ ಪ್ರಯೋಜನೆ ಪಡೆದುಕೊಳ್ಳುವಂತೆ ಕರೆ ನೀಡಿದರು. ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಕೆ. ದೀಪಕ್ ಮಾತನಾಡಿ, ಆಹಾರಕ್ಕಾಗಿ ಶ್ರಮ ಪಡಬೇಕಿಲ್ಲ. ಈ ನಿಟ್ಟಿನಲ್ಲಿ ಸರ್ಕಾರದ ಕ್ಷೀರಭಾಗ್ಯ ಯೋಜನೆ ಅತ್ಯಂತ ಉಪಕಾರಿಯಾಗಿದೆ ಎಂದರು. ಅಕ್ಕನ ಬಳಗ ಶಾಲೆಯ ಹಿರಿಯ ಶಿಕ್ಷಕ ಶಂಕರ್, ಮುಖ್ಯ ಶಿಕ್ಷಕರಾದ ಎಂ.ಜಿ. ಸುಗುಣ ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.