ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಪಾಶ್ಚಾತ್ಯ ಸಂಸ್ಕೃತಿಗೆ ಯುವಜನತೆ ಮರುಳಾಗದಿರಿ

Vishwanath S
Updated On : 31 Aug 2013, 12:11 pm

ಕ.ಪ್ರ.ವಾರ್ತೆ , ಮೈಸೂರು , ಆ. 30
ಯುವಜನತೆ ಪಾಶ್ಚಾತ್ಯ ಸಂಸ್ಕೃತಿಗೆ ಮರಳಾಗದಿರಿ ಎಂದು ಮೈಸೂರು ಅಬಕಾರಿ ಇಲಾಖೆಯ ಜಂಟಿ ಆಯುಕ್ತರ ಕಚೇರಿಯ ಅಬಕಾರಿ ಅಧೀಕ್ಷಕ ಎ.ಎಲ್. ನಾಗೇಶ್ ಹೇಳಿದರು.
ಮಲ್ಲಮ್ಮ ಮರಿಮಲ್ಲಪ್ಪ ಮಹಿಳಾ ಕಲಾ ಮತ್ತು ವಾಣಿಜ್ಯ ಕಾಲೇಜು ಜಗನ್ಮೋಹನ ಅರಮನೆಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಕಲಾಕಾರಂಜಿ 2013ನೇ ಸಾಲಿನ ಸಾಂಸ್ಕೃತಿಕ ವೇದಿಕೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಭಾರತೀಯ ಕಲೆ ಮತ್ತು  ಸಂಸ್ಕೃತಿಯು ಜೀವನದ ಅವಿಭಾಜ್ಯ ಅಂಗ. ಇಂತಹ ಸಂಸ್ಕೃತಿಯನ್ನು ಇಂದಿನ ಯುವಪೀಳಿಗೆ ಅನುಸರಿಸದೆ ಪಾಶ್ಚಾತ್ಯ ಸಂಸ್ಕೃತಿಗೆ ಮಾರು ಹೋಗಿ ಅದರ ಆಕರ್ಷಣೆಯತ್ತ ಮುಂದಾಗುತ್ತಿರುವುದು ದುರಂತದ ಸಂಗತಿ ಎಂದು ಅವರು ವಿಷಾದಿಸಿದರು.
ಶಿಕ್ಷಕರು ಶಾಲಾ ಕಾಲೇಜುಗಳಲ್ಲಿ ನಮ್ಮ ಪುರಾತನ ಕಲೆ, ಸಂಸ್ಕೃತಿ ಹಾಗೂ ಸಂಪ್ರದಾಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸುವ ಅಗತ್ಯವಿದೆ. ಪಾಶ್ಚಾತ್ಯ ಸಂಸ್ಕೃತಿಯ ನೃತ್ಯ ಮತ್ತಿತರ ಕಲೆಗೆ ಹೆಚ್ಚಿನ ಮನ್ನಣೆ ನೀಡುತ್ತಿರುವ ಕಾರಣ ವಿದ್ಯಾರ್ಥಿಗಳು ಅದನ್ನೇ ಜೀವನದ ಶೈಲಿಯಾಗಿ ಅನುಸರಿಸುತ್ತಿದ್ದಾರೆ. ಇಂತಹ ಮನೋಭಾವವನ್ನು ಬದಲಾಯಿಸಿ ದೇಸಿಯ ಕಲೆ ಮತ್ತು ಸಂಸ್ಕೃತಿ ರೂಢಿಸುವಲ್ಲಿ ಮುಂದಾಗಬೇಕು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಸಾಂಸ್ಕೃತಿಕ ವೇದಿಕೆ ಪದಾಧಿಕಾರಿಗಳಿಗೆ ಕರ್ತವ್ಯಧಾರಣೆ ಬೋಧಿಸಲಾಯಿತು. ಮರಿಮಲ್ಲಪ್ಪ ವಿದ್ಯಾ ಸಂಸ್ಥೆಯ ಅಧ್ಯಕ್ಷ ಎಸ್.ಪರಮಶಿವಯ್ಯ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಹಾಗೂ ಪ್ರಾಂಶುಪಾಲ ಪ್ರೊ.ಕೆ.ಎನ್. ಪಂಚಾಕ್ಷರಸ್ವಾಮಿ, ಉಪಪ್ರಾಂಶುಪಾಲ ಪ್ರೊ.ವೈ.ಡಿ. ಧನಂಜಯ, ಸಾಂಸ್ಕೃತಿಕ ವೇದಿಕೆ ಸಂಚಾಲಕಿ ಪ್ರೊ.ಶೈಲಾ ನಾಗರಾಜ್, ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಪ್ರೊ.ಆರ್. ಕೆಂಪರಾಜು ಇದ್ದರು. ನಂತರ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement