ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ದಸರಾ ಉಪಸಮಿತಿಗೆ ಕ್ರೀಡಾಪಟುಗಳ ನೇಮಕ

Srinivasa Murthy VN
Updated On : 31 Aug 2013, 11:39 am

ಕ.ಪ್ರ.ವಾರ್ತೆ ಮೈಸೂರು ಆ. 31
ದಸರಾ ಮಹೋತ್ಸವ ಸಂಬಂಧ ರಚಿಸುವ ಕ್ರೀಡಾ ಉಪಸಮಿತಿಗೆ ಕ್ರೀಡಾಪಟುಗಳನ್ನೇ ಪದಾಧಿಕಾರಿಗಳನ್ನಾಗಿ ನೇಮಕ ಮಾಡಲಾಗುವುದು ಎಂದು ಚಾಮರಾಜ ಕ್ಷೇತ್ರದ ಶಾಸಕ ವಾಸು ಹೇಳಿದರು.
ಶನಿವಾರ ನಗರದ ಲಯನ್ಸ್ ಕ್ಲಬ್‌ನಲ್ಲಿ ನಡೆದ ಮೈಸೂರು ಜಿಲ್ಲಾ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷ್‌ನ ರಜತ ಮಹೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಆಯಾ ಕ್ಷೇತ್ರದಲ್ಲಿ ಹೆಚ್ಚು ಅನುಭವ ಇರುವವರನ್ನೇ ನೇಮಿಸಿದರೆ ನ್ಯಾಯ ದೊರಕಿದಂತಾಗುತ್ತದೆ. ಹಾಗಾಗಿ ಈ ಬಾರಿಯ ದಸರಾ ಉಪಸಮಿತಿಗೆ ಈ ತತ್ವನ್ನು ಅನ್ವಯಿಸಲಾಗುವುದು. ಕ್ರೀಡಾಪಟುಗಳಿಗೆ ಮಾನ್ಯತೆ ನೀಡಲಾಗುವುದು ಎಂದರು. ಇದೇ ವೇಳೆ ಹದಿನೈದು ಮಂದಿ ಹಿರಿಯ ಕ್ರೀಡಾಪಟುಗಳನ್ನು ಸನ್ಮಾನಿಸಲಾಯಿತು. ಮೈಸೂರು ಜಿಲ್ಲಾ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷ್‌ನ ಅಧ್ಯಕ್ಷೆ ಸುಮನಾ ನರಸಿಂಹಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಆರ್. ಗುರು, ಸಂಸ್ಥೆಯ ಪದಾಧಿಕಾರಿಗಳಾದ ಪಿ.ಜಿ. ಸತ್ಯನಾರಾಯಣ, ಎನ್.ಆರ್. ಶಂಕರರಾವ್, ಎಸ್. ಮಹದೇವು, ಚಂದ್ರಶೇಖರ್, ನಾಣಯ್ಯ ಇದ್ದರು.

ಯುವಕರ ಪ್ರತಿಭೆ ಪ್ರೋತ್ಸಾಹಿಸಬೇಕು: ರೇವಣ
ಮೈಸೂರು
: ಯುವಕರಲ್ಲಿನ ಪ್ರತಿಭೆಗೆ ಸರ್ಕಾರವೆ ಉತ್ತಮ ವೇದಿಕೆ ಕಲ್ಪಿಸಿಕೊಡಬೇಕು ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಹೇಳಿದರು. ನಗರದ ಕಲಾಮಂದಿರದಲ್ಲಿ ವಿಶ್ವಮಾನವ ವಿದ್ಯಾರ್ಥಿ ಯುವ ವೇದಿಕೆಯು ಆಯೋಜಿಸಿರುವ ಸಾಂಸ್ಕೃತಿಕ ಹಬ್ಬ- 2013 ರಾಜ್ಯಮಟ್ಟದ ಅಂತರ ಕಾಲೇಜು ಸಾಂಸ್ಕೃತಿಕ ಮೇಳದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳ ಪ್ರತಿಭೆ ಪ್ರದರ್ಶನಕ್ಕೆ ಇದು ಉತ್ತಮ ವೇದಿಕೆಯಾಗಿದೆ. ವಿಶ್ವವಿದ್ಯಾಲಯ  ಮಟ್ಟ ಅಥವಾ ವಿಭಾಗೀಯ ಮಟ್ಟದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಲು ರಾಜ್ಯ ಸರ್ಕಾರ ಮುಂದಾಗಬೇಕು. ನಶಿಸಿ ಹೋಗುತ್ತಿರುವ ನಮ್ಮ ಸಂಸ್ಕೃತಿ ಉಳಿಸಲು ಇದೊಂದು ಉತ್ತಮ ಅವಕಾಶ. ಆದ್ದರಿಂದ ವಿದ್ಯಾರ್ಥಿಗಳ ಪ್ರತಿಭೆಗೆ ತಕ್ಕಂತೆ ವಿದ್ಯಾಭ್ಯಾಸ ನೀಡುವ ಜತೆಗೆ ಪ್ರತಿಭೆ ಪ್ರದರ್ಶನಕ್ಕೂ ಅವಕಾಶ ಕಲ್ಪಿಸಬೇಕು ಎಂದರು. ಮೈಸೂರು ವಿವಿ ಕುಲಪತಿ ಪ್ರೊ.ಕೆ.ಎಸ್. ರಂಗಪ್ಪ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ಕೆ.ಆರ್. ಪೇಟೆ ಶಾಸಕ ಕೆ.ಸಿ. ನಾರಾಯಣಗೌಡ, ಸಿ. ಪವನ್‌ಕುಮಾರ್ ಅವರನ್ನು ಅಭಿನಂದಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement