ಟಿ.ಆರ್.ಶಿವಕುಮಾರ್ಗೆ ಟಿಕೆಟ್ ನೀಡಿ
ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಗರದ ಕೃಷ್ಣರಾಜ ಕ್ಷೇತ್ರದಿಂದ ಕಾಂಗ್ರೆಸ್ ಸೇವಾ ದಳದ ಸಹಸಂಘಟಕ ಟಿ.ಆರ್. ಶಿವಕುಮಾರ್ ಅವರಿಗೆ ಟಿಕೆಟ್ ನೀಡುವಂತೆ ನಗರ ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ಕೆ.ಎಸ್. ಕೃಷ್ಣಮೂರ್ತಿ ಆಗ್ರಹಿಸಿದರು. ನಗರ ಮತ್ತು ಜಿಲ್ಲೆಯಲ್ಲಿ ಸೇವಾದಳದ ಮುಖ್ಯ ಸಂಘಟಕರಾಗಿ ಉತ್ತಮ ಸಂಘಟನೆ ಹಾಗೂ ಸೇವೆ ಮಾಡಿದ್ದು ಅದೇ ಕಾರಣಕ್ಕಾಗಿ ರಾಜ್ಯ ಸಮಿತಿಗೆ ಬಡ್ತಿ ಪಡೆದರು. ಪಕ್ಷದ ಸರ್ವತೋಮುಖ ಬೆಳವಣಿಗೆಗೆ ಪೂರಕವಾದ ಕಾರ್ಯಕ್ರಮಗಳನ್ನು ರಾಜ್ಯದೆಲ್ಲೆಡೆ ವಿಶೇಷವಾಗಿ ಮೈಸೂರಿನಲ್ಲಿ ರೂಪಿಸಿದ್ದಾರೆ. ಸೇವಾ ದಳದಿಂದ ನಾಲ್ಕು ಅಭ್ಯರ್ಥಿಗಳನ್ನೂ ಶಿಫಾರಸು ಮಾಡುವಂತೆ ಹೈಕಮಾಂಡ್ ಸೂಚಿಸಿರುವ ಹಿನ್ನೆಲೆಯಲ್ಲಿ ಶಿವಕುಮಾರ್ ಅವರ ಹೆಸರನ್ನು ಕಳುಹಿಸುತ್ತಿದ್ದೇವೆ ಎಂದು ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಪದಾಧಿಕಾರಿಗಳಾದ ಎಸ್. ಶಿವಶಂಕರ್, ಶಂಕರಮೂರ್ತಿ, ಕೆ.ಶಿವರಾಜ್, ಪಿ.ಕುಮಾರಸ್ವಾಮಿ ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.