ತಂಬಾಕು ಬೆಳೆಗಾರರ ಪ್ರತಿಭಟನೆ
ಪಿರಿಯಾಪಟ್ಟಣ: ತಂಬಾಕು ಬೆಳೆಗಾರರನ್ನು ಅಧಿಕೃತ ಹಾಗೂ ಅನಧಿಕೃತ ಎಂದು ವಿಂಗಡಿಸುವ ಮೂಲಕ, ತಂಬಾಕು ಮಂಡಳಿ ಹಾಗೂ ಕೇಂದ್ರ ಸರ್ಕಾರ ತಾರತಮ್ಯ ನೀಡಿ ಅನುಸರಿಸುತ್ತಿದೆ ಎಂದು ಆರೋಪಿಸಿ, ರಾಜ್ಯ ತಂಬಾಕು ಬೆಳೆಗಾರರ ಹಿತರಕ್ಷಣಾ ಸಮಿತಿ ಸದಸ್ಯರು ಇಲ್ಲಿನ ತಂಬಾಕು ಮಂಡಳಿ ವಲಯ ಕಚೇರಿ ಎದುರು ಪ್ರತಿಭಟಿಸಿದರು.
ಸಮಿತಿ ಅಧ್ಯಕ್ಷ ಗೋವಿಂದಯ್ಯ ಮಾತನಾಡಿ, ಪರವಾನಗಿ ಹೊಂದಿರದ ತಂಬಾಕು ಬೆಳೆಗಾರರನ್ನು ಕಡೆಗಣಿಸುವ ಮೂಲಕ ಸಾಲ ಮಾಡಿ ತಂಬಾಕು ಬೆಳೆದಿರುವ ತಂಬಾಕು ರೈತರನ್ನು ಸಂಕಷ್ಟಕ್ಕೀಡು ಮಾಡಲು ಹೊರಟಿದೆ. ಅನಧಿಕೃತ ತಂಬಾಕು ಬೆಳೆಗಾರರು ಎಂದು ಹಣೆಪಟ್ಟಿ ಹಚ್ಚಿರುವ ಮಂಡಳಿ ಅವರಿಗೆ ಯಾವುದೇ ಸವಲತ್ತು ವಿತರಿಸದೆ, 22.5/2 ರಷ್ಟು ದಂಡ ವಿಧಿಸಿ ಸುಲಿಗೆ ಮಾಡುತ್ತಿದೆ.
ಕೂಡಲೇ ಪರವಾನಗಿ ಇಲ್ಲದ ತಂಬಾಕು ಬೆಳೆಗಾರರ ತಂಬಾಕು ಖರೀದಿಸಬೇಕು. ಮಾರಾಟದ ಮೇಲೆ ವಿಧಿಸುವ ತೆರಿಗೆಯನ್ನು ರದ್ದುಗೊಳಿಸಿ ಪರವಾನಗಿ ಹೊಂದಿರುವ ತಂಬಾಕು ಬೆಳೆಗಾರರಿಗೆ ನೀಡುವ ಸವಲತ್ತುಗಳನ್ನು ಪರವಾನಗಿ ಇಲ್ಲದವರಿಗೂ ವಿಸ್ತರಿಸಬೇಕು ಎಂದು ಆಗ್ರಹಿಸಿ ತಂಬಾಕು ಮಂಡಳಿಯ ವಲಯ ವ್ಯವಸ್ಥಾಪಕ ವೇಣುಗೋಪಾಲ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಸಮಿತಿ ಉಪಾಧ್ಯಕ್ಷ ವೀತಪ್ಪ, ಎಸ್. ಕೃಷ್ಣಾನಾಯಕ್, ಪ್ರಧಾನ ಕಾರ್ಯದರ್ಶಿ ವಿ. ಬಸವರಾಜು ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.