ನಾಳೆ ಸುವರ್ಣ ಮಹೋತ್ಸವ
ಮೈಸೂರು: ಹಾಸನ ಜಿಲ್ಲೆ ಅರಕಲಗೂಡು ತಾಲೂಕು ಕೇರಳಾಪುರದ ವಿದ್ಯಾಗಣಪತಿ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ ಸುವರ್ಣ ಮಹೋತ್ಸವವನ್ನು ಫೆ.3 ರಂದು ಪ್ರೌಢಶಾಲಾ ಆವರಣದಲ್ಲಿ ಆಯೋಜಿಸಲಾಗಿದೆ.
ಅಂದು ಬೆಳಗ್ಗೆ 9.30ಕ್ಕೆ ಉಪವಿಭಾಗಾಧಿಕಾರಿ ಪಿ.ಐ. ಶ್ರೀವಿದ್ಯಾ ಉದ್ಘಾಟಿಸಲಿದ್ದು, ಶಾಸಕ ಎ.ಮಂಜು ಅಧ್ಯಕ್ಷತೆ ವಹಿಸುವರು. ನಿವೃತ್ತ ಶಿಕ್ಷಕ ಸಿ. ಚಂದ್ರಶೇಖರಯ್ಯ ಶಾಲೆಯ ಬಯಲು ರಂಗಮಂದಿರ ಉದ್ಘಾಟಿಸಲಿದ್ದು, ನ್ಯಾ. ಕೆ.ಎನ್. ಕೇಶವನಾರಾಯಣ ಸಂಚಿಕೆ ಬಿಡುಗಡೆಗೊಳಿಸುವರು. ಗ್ರಾಪಂ ಅಧ್ಯಕ್ಷ ಕೆ.ಎಸ್. ಕರೀಗೌಡ ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸಲಿದ್ದು, ನವೀಕರಿಸಿದ ಶಾಲಾ ಕಟ್ಟಡ ಕೊಠಡಿಗಳನ್ನು ಕೆ.ಆರ್. ಸೂರ್ಯನಾರಾಯಣಪ್ಪ, ಬಿ.ಕೆ. ಅಣ್ಣೇಗೌಡ ಉದ್ಘಾಟಿಸುವರು ಎಂದು ನಿವೃತ್ತ ಮುಖ್ಯ ಶಿಕ್ಷಕ ಕೆ.ಎಸ್. ವೆಂಕಟರಾಮಯ್ಯ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಹಳೆಯ ವಿದ್ಯಾರ್ಥಿಗಳಾದ ಕೆ.ಪಿ. ಕಿರಣ್ಕುಮಾರ್, ಕೆ. ಶಿವಣ್ಣ, ಕೆ.ಎಂ. ಕೃಷ್ಣೇಗೌಡ, ಬಸವಶೆಟ್ಟಿ ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.