ರಂಗಾಯಣ ಎದುರು ವಿದ್ಯಾರ್ಥಿಗಳ ಧರಣಿ
ಮೈಸೂರು: ರಂಗಾಯಣದಿಂದ ರಂಗಶಿಕ್ಷಣ ವಿದ್ಯಾರ್ಥಿಗಳಿಗೆ ಯಾವುದೇ ಅನುಕೂಲವಾಗುತ್ತಿಲ್ಲ ಎಂದು ಆರೋಪಿಸಿ ವಿದ್ಯಾರ್ಥಿಗಳು ರಂಗಾಯಣದ ಎದುರು ಶುಕ್ರವಾರ ಮೌನ ಪ್ರತಿಭಟನೆ ನಡೆಸಿದರು.
ಕಳೆದ 9 ತಿಂಗಳಿನಿಂದಲೂ ನಮಗೆ ನಾಟಕ ಮಾಡಲು ಅವಕಾಶ ನೀಡುತ್ತಿಲ್ಲ. ರಂಗಾಯಣದಲ್ಲಿನ ಆಡಳಿತ ವೈಖರಿಯಿಂದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ರಂಗಾಯಣ ನಿರ್ದೇಶಕರು ಮತ್ತು ಉಪ ನಿರ್ದೇಶಕರು ತಿಂಗಳಾದರೂ ನಮ್ಮ ಸಮಸ್ಯೆ ಕೇಳುವುದಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದರು.
ಬಹುರೂಪಿ ಸಂದರ್ಭದಲ್ಲಿ ಬಂದಿದ್ದ ನಿರ್ದೇಶಕರು ಈಗ ರಂಗಾಯಣಕ್ಕೆ ಬರುತ್ತಿಲ್ಲ. ರಂಗಶಿಕ್ಷಣ ವಿದ್ಯಾರ್ಥಿಗಳೆಲ್ಲರೂ ಜೀತದಾಳುಗಳಂತೆ ಕೆಲಸ ಮಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ರಂಗಾಯಣದಿಂದ ನಮಗೆ ಯಾವುದೇ ರೀತಿಯ ಸೌಲಭ್ಯವೂ ಲಭ್ಯವಾಗುತ್ತಿಲ್ಲ ಎಂದು ದೂರಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.