6ರಿಂದ ಸುತ್ತೂರು ಜಾತ್ರೆ ಶುರು
ಮೈಸೂರು: ನಂಜನಗೂಡು ತಾಲೂಕು ಸುತ್ತೂರು ಶ್ರೀ ಕ್ಷೇತ್ರದಲ್ಲಿರುವ ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠದ ವತಿಯಿಂದ ಆದಿಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಮಹೋತ್ಸವವನ್ನು ಫೆ.6 ರಿಂದ 11 ರವರೆಗೆ ಹಮ್ಮಿಕೊಳ್ಳಲಾಗಿದೆ. 1050 ವರ್ಷಗಳಷ್ಟು ಹಿಂದೆಯೇ ಸಂಸ್ಥಾಪಿಸಲಾದ ಶ್ರೀಮಠದಿಂದ ಇಲ್ಲಿಯವರೆಗೆ ಧಾರ್ಮಿಕ ಹಾಗೂ ಸೇವಾ ಕಾರ್ಯಗಳು ನಡೆದುಕೊಂಡು ಬಂದಿವೆ. ಈಗಿನ 24ನೇ ಪೀಠಾಧ್ಯಕ್ಷರಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ನೇತೃತ್ವದಲ್ಲಿ ಸುತ್ತೂರು ಜಾತ್ರೆ ನಡೆಯಲಿದೆ. ಫೆ.8 ರಂದು ಶಿವರಾತ್ರೀಶ್ವರರ ರಥೋತ್ಸವ ಜರುಗಲಿದೆ. ಜತೆಗೆ ತೆಪ್ಪೋತ್ಸವ, ಮಹದೇಶ್ವರ ಉತ್ಸವ, ಕೊಂಡೊತ್ಸವ ಮೊದಲಾದ ಉತ್ಸವಗಳು ವಿಜೃಂಭಣೆಯಿಂದ ನೆರವೇರಲಿವೆ ಎಂದು ಜಾತ್ರಾ ಮಹೋತ್ಸವ ಸಮಿತಿಯ ಗೌರವ ಅಧ್ಯಕ್ಷ, ಮಾಜಿ ಶಾಸಕ ಎಚ್. ಗಂಗಾಧರನ್ ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.