ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಸಮಗ್ರ ಬದಲಾವಣೆಗೆ ಶಿಕ್ಷಕರ ಸಜ್ಜು: ಪುಟ್ಟು

Parashurama
Updated On : 3 Feb 2013, 11:48 am

ಮೈಸೂರು: ಇಂದು ಶಿಕ್ಷಣದ ಸಮಗ್ರ ಬದಲಾವಣೆಗೆ ಪೂರಕವಾಗಿ ಶಿಕ್ಷಕರನ್ನು ಸಜ್ಜುಗೊಳಿಸಲಾಗುತ್ತಿದೆ ಎಂದು ಪದವಿ ಪೂರ್ವ ಇಲಾಖೆಯ ಉಪನಿರ್ದೇಶಕ ಕೆ.ಎಂ. ಪುಟ್ಟು ಹೇಳಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿರುವ ಅರ್ಥಶಾಸ್ತ್ರ ಉಪನ್ಯಾಸಕರ ಎರಡನೇ ತಂಡದ ರಾಜ್ಯಮಟ್ಟದ ಮೂರು ದಿನಗಳ ಪುನಶ್ಚೇತನ ಕಾರ್ಯಕ್ರಮವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.
ಏಕರೂಪ ಶಿಕ್ಷಣ ಕ್ರಮವನ್ನು ಜಾರಿಗೊಳಿಸುವ ಮೂಲಕ ಕೇಂದ್ರವು ಈ ಸಾಲಿನಲ್ಲಿ ಪಠ್ಯ ಪರಿಷ್ಕರಿಸಿದೆ. ಈ ಹಿನ್ನೆಲೆಯಲ್ಲಿ ನೂತನ ಪಠ್ಯಗಳ ಬೋಧನೆಗೆ ಪೂರಕ ಜ್ಞಾನವನ್ನು ಶಿಕ್ಷಕರು ಮೊದಲು ಹೊಂದುವುದು ಅವಶ್ಯಕ.
ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಿಕ್ಷಕರಿಗೆ ಇಂತಹ ಪುನಶ್ಚೇತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಮುಖ್ಯ ಅತಿಥಿಯಾಗಿ ಮಾತನಾಡಿದ ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿ ಸಹಾಯಕ ನಿರ್ದೇಶಕ ಹೊನ್ನಯ್ಯ, ಹೊಸ ಪಠ್ಯ ಕ್ರಮಕ್ಕೆ ಅನುಗುಣವಾಗಿ ಬೋಧನಾ ಸಾಮರ್ಥ್ಯ ಹೆಚ್ಚಿಸಲು ಶಿಕ್ಷಕರಿಗೆ ಇಂತಹ ಪುನಶ್ಚೇತನ ಕಾರ್ಯಕ್ರಮ ಏರ್ಪಡಿಸಲಾಗುತ್ತಿದೆ. ಇದರ ಪ್ರಯೋಜನ ಪಡೆದು ಜ್ಞಾನವೃದ್ಧಿಸಿಕೊಂಡು ಉತ್ತಮ ವಿದ್ಯಾರ್ಥಿಗಳನ್ನು ತಯಾರಿಸುವಲ್ಲಿ ಮುಂದಾಗಬೇಕು ಎಂದು ಕರೆ ನೀಡಿದರು.
ವಿದ್ಯಾವರ್ಧಕ ಶಿಕ್ಷಣ ಸಂಸ್ಥೆ ಗೌರವ ಕಾರ್ಯದರ್ಶಿ ಹಾಗೂ ಮಾಜಿ ಮೇಯರ್ ಪಿ. ವಿಶ್ವನಾಥ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಸಂಯೋಜಕ ನಾಗಮಲ್ಲೇಶ್, ಸಂಯೋಜಕ ಎಚ್. ರಾಜು, ಪ್ರಾಂಶುಪಾಲ ಸಿದ್ದರಾಜು ಇದ್ದರು. ರಾಜ್ಯದ ನಾನಾ ಭಾಗಗಳ 100 ಮಂದಿ ಅರ್ಥಶಾಸ್ತ್ರ ಉಪನ್ಯಾಸಕರು ಭಾಗವಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments