'ಕಾವೇರಿ ಉಳಿಸಿ, ಜನತೆ ಹಿತ ಕಾಪಾಡಿ'
ಮೈಸೂರು: ಕಾವೇರಿ ನೀರನ್ನು ತಮಿಳುನಾಡಿಗೆ ನಿರಂತರವಾಗಿ ಹರಿಸುತ್ತಿರುವುದನ್ನು ಖಂಡಿಸಿ ಕಾವೇರಿ ಉಳಿಸಿ, ಜನತೆಯ ಹಿತ ಕಾಪಾಡಿ ಎಂದು ಒತ್ತಾಯಿಸಿ ಕಾವೇರಿ ಹೋರಾಟ ಸಮಿತಿ ನೇತೃತ್ವದಲ್ಲಿ ನಗರದ ವಿವಿಧ ಸಂಘ ಸಂಸ್ಥೆಯವರು ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟಿಸಿದರು.
ಮುಂಬರುವ ಚುನಾವಣೆಗೆ ಮತ ಕೇಳಲು ಬರುವ ರಾಜಕೀಯ ಪಕ್ಷದ ಮುಖಂಡರು ಹಾಗೂ ಅಭ್ಯರ್ಥಿಗಳಿಗೆ ಮೊದಲು ಕಾವೇರಿ ನೀರು ಕೊಡಿ, ನಂತರ ಮತ ಕೇಳಿ ಎಂದು ಸಾರ್ವಜನಿಕರಿಗೆ ಕರೆ ನೀಡಿದರು.
ತಮಿಳುನಾಡಿಗೆ ಕಾವೇರಿ ನೀರನ್ನು ನಿರಂತರವಾಗಿ ಹರಿಸುತ್ತಿರುವುದನ್ನು ಕೂಡಲೇ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ಕಸಾಪ ಜಿಲ್ಲಾಧ್ಯಕ್ಷ ಎಂ. ಚಂದ್ರಶೇಖರ್, ಮಾಜಿ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್, ವಿವಿಧ ಸಂಘಟನೆಗಳ ಮುಖಂಡರಾದ ಮೂಗೂರು ನಂಜುಂಡಸ್ವಾಮಿ, ಎಸ್. ಬಾಲಕೃಷ್ಣ, ನಾಲಾಬೀದಿ ರವಿ, ಕೆ.ಎಸ್. ಶಿವರಾಮು, ವೆಂಕಟೇಶ್, ರಾಮೇಗೌಡ, ನಳಿನಿ ಮೊದಲಾದವರು ಇದ್ದರು.