ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

'ಪರಿಶ್ರಮದಿಂದ ಮಾತ್ರ ಸಾಧನೆ'

Parashurama
Updated On : 17 Feb 2013, 12:14 pm

ಹೊಸೂರು: ವಿದ್ಯಾರ್ಥಿಗಳ ಶಿಕ್ಷಣದ ಜೀವನದಲ್ಲಿ ಅದೃಷ್ಟ ಮತ್ತು ಪರಿಶ್ರಮ ಬಹಳ ಮುಖ್ಯವಾಗಿದ್ದು, ಅದೃಷ್ಟ ಕೈಕೊಟ್ಟರೂ ಪರಿಶ್ರಮ ನಮ್ಮ ಕೈ ಹಿಡಿಯುವುದರಿಂದ ಎಲ್ಲವನ್ನು ಸಾಧಿಸಬಹುದೆಂದು ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಜೆ. ದ್ವಾರಕೀಶ್ ಅಭಿಪ್ರಾಯಪಟ್ಟರು.
ಹೊಸೂರು ಸರ್ಕಾರಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದ್ದ ಶಾರದಾ ಪೂಜೆ ಮತ್ತು ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮಾಂತರ ಪ್ರದೇಶದ ಶಾಲೆಗಳಲ್ಲಿ ಓದಿದ ಮಕ್ಕಳು ಪ್ರತಿಭಾ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉನ್ನತಶ್ರೇಣಿ ಪಡೆಯುತ್ತಿದ್ದು, ಇದಕ್ಕೆ ಶಿಕ್ಷಕರ ಪರಿಶ್ರಮ ಮತ್ತು ಪೋಷಕರ ಅಗತ್ಯ ಸಹಕಾರವೆ ಕಾರಣವಾಗಿದೆ ಎಂದ ಅವರು, ಜಿಪಂ ಕ್ಷೇತ್ರದ ವ್ಯಾಪ್ತಿಯಲ್ಲಿ ಸರ್ಕಾರಿ ಶಾಲೆಗಳು ಗುಣಮಟ್ಟದ ಶಿಕ್ಷಣ ನೀಡುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.
ಹಳಿಯೂರು ಗ್ರಾಪಂ ಮಾಜಿ ಉಪಾಧ್ಯಕ್ಷ ಮಂಜುನಾಥ್, ಕಾಲೇಜು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಆರ್. ಮಧುಚಂದ್ರ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎಚ್.ವಿ. ಹರೀಶ್, ಪ್ರಾಂಶುಪಾಲ ರಾಮರಾಜ್, ತನ್ವೀರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement