ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

Parashurama
Updated On : 17 Feb 2013, 11:34 am

ಮೈಸೂರು: ನಗರದ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ 14 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅಭ್ಯರ್ಥಿಗಳು 18 ರಿಂದ 44 ವರ್ಷ ವಯೋವುತಿ ಹೊಂದಿದ್ದು, ಕನಿಷ್ಠ 4ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಹುದ್ದೆ ಖಾಲಿ ಇರುವ ವಾರ್ಡಿನ ಸ್ಥಳೀಯ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸಬೇಕು.  ಅರ್ಜಿ ಸಲ್ಲಿಸುವ ದಿನಾಂಕದ 6 ತಿಂಗಳೊಳಗೆ ಸಂಬಂಧಪಟ್ಟ ತಹಸೀಲ್ದಾರ್ ಅವರಿಂದ ಮೂಲ ವಾಸ ಸ್ಥಳ ದೃಢೀಕರಣ ಪತ್ರ ಮತ್ತು ಬಿಪಿಎಲ್ ಕಾರ್ಡ್ ಪ್ರತಿಯನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಭರ್ತಿ ಮಾಡಿದ ಅರ್ಜಿಗಳನ್ನು ಮಾ. 7ರ ಸಂಜೆ 5.30 ರೊಳಗೆ ಕಚೇರಿಗೆ ಸಲ್ಲಿಸುವುದು. ವಿವರಗಳಿಗೆ ದೂ. 0821- 2491962 ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement