ದೊಡ್ಡಅರಳಿಗೆರೆ ಗ್ರಾಪಂ ಅಧ್ಯಕ್ಷೆ ಲಕ್ಷಮ್ಮ
ಸೂಲಿಬೆಲೆ: ಇಲ್ಲಿಗೆ ಸಮೀಪದ ದೊಡ್ಡಅರಳಿಗೆರೆ ಗ್ರಾಪಂ ಎರಡನೇ ಅವಧಿಗಾಗಿ ನಡೆದ ಚುನಾವಣೆ ಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಹಿಂದುಳಿದ ವರ್ಗ(ಎ)ಗೆ ಮೀಸಲಾಗಿದ್ದ ಅಧ್ಯಕ್ಷೆ ಸ್ಥಾನಕ್ಕೆ ಬುವನಹಳ್ಳಿ ಗ್ರಾಮದ ಲಕ್ಷಮ್ಮ ನಾಮಪತ್ರ ಸಲ್ಲಿಸಿದ್ದರು. ಪರಿಶಿಷ್ಟ ಜಾತಿಗೆ ಮೀಸಲಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಗುಳ್ಳಹಳ್ಳಿಯ ನಾರಾಯಣಸ್ವಾಮಿ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ಇವರಿಗೆ ಸ್ವರ್ಧಿಯಾಗಿ ಯಾವುದೇ ಅಭ್ಯರ್ಥಿ ನಾಮಪತ್ರ ಸಲ್ಲಿಸದ ಕಾರಣ ಅವಿರೋಧ ಆಯ್ಕೆಯಾದರು.