ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಜೆಡಿಎಸ್ ಸಮಾವೇಶ

Parashurama
Updated On : 24 Feb 2013, 11:01 am

ಸರಗೂರು: ಮೈಸೂರಿನ ಮಹಾರಾಜ ಕಾಲೇಜು ಆವರಣದಲ್ಲಿ ಫೆ.25 ರಂದು ಜಿ.ಟಿ. ದೇವೇಗೌಡ ಜೆಡಿಎಸ್ ಸೇರ್ಪಡೆ ಕಾರ್ಯಕ್ರಮಕ್ಕೆ ಸರಗೂರಿನಿಂದ ಒಂದು ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸುವರು ಎಂದು ಜೆಡಿಎಸ್ ಬ್ಲಾಕ್ ಅಧ್ಯಕ್ಷ ಪಿ. ರವಿ  ತಿಳಿಸಿದ್ದಾರೆ.
ಅಂಗನವಾಡಿ: ಅರ್ಜಿ
ಎಚ್.ಡಿ. ಕೋಟೆ: ತಾಲೂಕಿನ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ಕಚೇರಿಯ 5 ಅಂಗನವಾಡಿಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸೇವೆಗೆ ಮಾಸಿಕ ಗೌರವಧನದ ಮೇಲೆ ಸ್ಥಳೀಯ ಗ್ರಾಮಗಳ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಬಗ್ಗೆ ಪೂರ್ಣ ವಿವರವನ್ನು ಆಯಾ ಗ್ರಾಪಂ ಕಚೇರಿ ಶಾಲೆಗಳಲ್ಲಿ, ಅಂಗನವಾಡಿ ಕೇಂದ್ರಗಳಲ್ಲಿ ತಾಲೂಕಿನ ಎಲ್ಲಾ ಸರ್ಕಾರಿ ಕಚೇರಿ, ಶಿಶು ಅಭಿವೃದ್ಧಿ ಯೋಜನಾ ಕಚೇರಿ ನಾಮಫಲಕದಲ್ಲಿ ಪ್ರಕಟಿಸಲಾಗಿದ್ದು, ಆಸಕ್ತರು ಮಾ. 8 ರೊಳಗೆ ಅರ್ಜಿ ಸಲ್ಲಿಸಬಹುದು. ದೂ. 08228- 255320.
ಪೋಲಿಯೋ ಕಾರ್ಯಕ್ರಮ
ನಂಜನಗೂಡು: ತಾಲೂಕಿನ ಬಿಳುಗಲಿ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಗ್ರಾಪಂ ಅಧ್ಯಕ್ಷೆ ಶೋಭಾ, ತಾಪಂ ಮಾಜಿ ಸದಸ್ಯ ಬಿ.ಸಿ. ಪುರುಷೋತ್ತಮ್ ಅವರು ಮಕ್ಕಳಿಗೆ ಪೋಲಿಯೋ ಹನಿ ಹಾಕುವುದರ ಮೂಲಕ ಚಾಲನೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement