ಬಿಎಸ್ವೈ ಹುಟ್ಟುಹಬ್ಬ ಅಂಗವಾಗಿ ಹಣ್ಣು ವಿತರಣೆ
ಮೈಸೂರು: ಮಾಜಿ ಮುಖ್ಯಮಂತ್ರಿ ಹಾಗೂ ಕೆಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹುಟ್ಟುಹಬ್ಬದ ಅಂಗವಾಗಿ ಅವರ ಅಭಿಮಾನಿಗಳು ಮತ್ತು ಕೆಜೆಪಿ ಕಾರ್ಯಕರ್ತರು ಕೇಕ್ ಕತ್ತರಿಸಿ, ಹಣ್ಣ ಹಂಪಲು ವಿತರಿಸಿದರು.
ಬಿ.ಎಸ್. ಯಡಿಯೂರಪ್ಪ ಅವರ 71ನೇ ಹುಟ್ಟುಹಬ್ಬ ಅಂಗವಾಗಿ ಕೆಜೆಪಿ ಮುಖಂಡ ಹಾಗೂ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎಚ್.ವಿ. ರಾಜೀವ್ ಅವರು ಕೆ.ಆರ್. ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದರು. ಆಸ್ಪತ್ರೆಯಲ್ಲಿನ ನೂರಾರು ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಈ ಸಂದರ್ಭದಲ್ಲಿ ಪಕ್ಷದ ನೂರಾರು ಕಾರ್ಯಕರ್ತರು ಮತ್ತು ಅಭಿಮಾನಿಗಳು ಇದ್ದರು.
ಕರ್ನಾಟಕದ ಬಡವರ ಬಂಧು ಬಿ.ಎಸ್. ಯಡಿಯೂರಪ್ಪ ಅಭಿಮಾನಿಗಳ ಬಳಗದ ಪದಾಧಿಕಾರಿಗಳು ಯಡಿಯೂರಪ್ಪ ಅವರ ಹುಟ್ಟುಹಬ್ಬದ ಅಂಗವಾಗಿ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಬಳಗದ ಜಿಲ್ಲಾಧ್ಯಕ್ಷ ಆಲನಹಳ್ಳಿ ರಾಜು, ಕೆ.ಆರ್. ಕ್ಷೇತ್ರದ ಅಧ್ಯಕ್ಷ ಮಂಜುನಾಥ್ ಪ್ರಸಾದ್, ಪದಾಧಿಕಾರಿಗಳಾದ ನವೀನ್ಕುಮಾರ್, ಟಿ.ಪಿ. ಕುಮಾರ್ ಪಾಟೀಲ್, ಸುಜೇಂದ್ರ, ವಕೀಲ ಬಿ.ಎಸ್. ಶಿವಕುಮಾರ್, ಮಂಜೇಶ್, ಬದನವಾಳು ವೀರಭದ್ರಸ್ವಾಮಿ, ಮಧು, ಜಿ. ನಿಖಿಲ್ ಇತರರು ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.