ಕುಡಿವ ನೀರಿಗೆ 21 ಕೋಟಿ ವೆಚ್ಚ
ಸಾಲಿಗ್ರಾಮ: ಮೇಲೂರು ಗ್ರಾಪಂ ವ್ಯಾಪ್ತಿಯ 10 ಹಳ್ಳಿಗಳಿಗೆ ಶಾಶ್ವತವಾಗಿ ಕಾವೇರಿ ನದಿಯಿಂದ ಕುಡಿಯುವ ನೀರು ಸರಬರಾಜು ಯೋಜನೆಗಾಗಿ 21 ಕೋಟಿ ವೆಚ್ಚದ ಕಾಮಗಾರಿಗಾಗಿ ಮಂಜೂರಾತಿ ದೊರೆತಿದ್ದು, ಶೀಘ್ರದಲ್ಲಿಯೆ ಕಾಮಗಾರಿ ಆರಂಭಿಸಲಾಗುವುದೆಂದು ಶಾಸಕ ಸಾ.ರಾ. ಮಹೇಶ್ ಹೇಳಿದರು. ಸಮೀಪ ಮೇಲೂರು ಗ್ರಾಮದಲ್ಲಿ 10 ಲಕ್ಷ ವೆಚ್ಚದ ರಸ್ತೆ ಡಾಂಬರಿಕರಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ಗ್ರಾಮಕ್ಕೆ ನಾನು ಶಾಸಕನಾಗಿ ಆಯ್ಕೆಯಾದ ನಂತರ ಸಮುದಾಯ ಭವನ, ಪಶು ಆಸ್ಪತ್ರೆ, ಸರ್ಕಾರಿ ಶಾಲೆಗೆ ಕಟ್ಟಡ, ಗ್ರಾಮವನ್ನು ಸುವರ್ಣ ಗ್ರಾಮ ಯೋಜನೆ ಮೂಲಕ ಅಭಿವೃದ್ಧಿ ಮಾಡಲಾಗಿದ್ದು, 45 ಲಕ್ಷ ವೆಚ್ಚದಲ್ಲಿ ಗ್ರಾಮದ ವ್ಯಾಪ್ತಿಯಲ್ಲಿ ಚರಂಡಿ ಮತ್ತು ರಸ್ತೆ ಅಭಿವೃದ್ಧಿ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ತಾಪಂ ಅಧ್ಯಕ್ಷೆ ಕವಿತಾ ರವಿ, ಜಿಪಂ ಸದಸ್ಯೆ ಕಲ್ಪನಾ ಧನಂಜಯ, ತಾಪಂ ಸದಸ್ಯ ಕೃಷ್ಣೇಗೌಡ, ತಂದ್ರೆ ಗ್ರಾಪಂ ಅಧ್ಯಕ್ಷೆ ರೇಣುಕಮ್ಮ, ಗ್ರಾಪಂ ಮಾಜಿ ಅಧ್ಯಕ್ಷ ತುಳಸಿ ರಾಮೇಗೌಡ, ಗ್ರಾಪಂ ಸದಸ್ಯೆ ಜ್ಯೋತಿ ಚಂದ್ರಹಾಸ, ಎಸ್ಡಿಎಂಸಿ ಅಧ್ಯಕ್ಷ ಆನಂದ್, ಹೇಮಾವತಿ ನಾಲಾ ವಿಭಾಗದ ಎಇಇ ರಂಗಸ್ವಾಮಿ, ಎಂಜಿನಿಯರ್ ಚಂದ್ರಕಾಂತ್, ಮುಖಂಡರಾದ ಜೆಸಿಪಿ ಮಂಜು, ಅಶೋಕ, ಚಂದ್ರಕಾಂತ್, ಸಾ.ರಾ. ರಮೇಶ್, ರವಿ, ಶಿವಕುಮಾರ್ ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.