ಮೈಸೂರು

ಅದ್ಧೂರಿ ಗಣರಾಜ್ಯೋತ್ಸವಕ್ಕೆ ನಗರ ಸಿದ್ಧ

ಮೈಸೂರು: ನಗರದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಅದ್ಧೂರಿ ಗಣರಾಜ್ಯೋತ್ಸವಕ್ಕೆ ಸಿದ್ಧತೆಗಳು ನಡೆಯುತ್ತಿವೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎ. ರಾಮದಾಸ್ ಅವರು ಅಂದು ಬೆಳಗ್ಗೆ 9ಕ್ಕೆ ರಾಷ್ಟ್ರ ಧ್ವಜಾರೋಹಣ ನೆರವೇರಿಸುವರು.
ಮುಖ್ಯ ಅತಿಥಿಗಳಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಗೃಹ ಮಂಡಳಿ ಅಧ್ಯಕ್ಷ ಜಿ.ಟಿ. ದೇವೇಗೌಡ, ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ಆರ್. ಕೃಷ್ಣಮೂರ್ತಿ, ಮೇಯರ್ ಎಂ.ಸಿ. ರಾಜೇಶ್ವರಿ, ಜಿಪಂ ಅಧ್ಯಕ್ಷ ಕಾ.ಪು. ಸಿದ್ಧವೀರಪ್ಪ ಭಾಗವಹಿಸುವರು.
ಅತಿಥಿಗಳಾಗಿ ಸಂಸದ ಎಚ್. ವಿಶ್ವನಾಥ್, ಆರ್. ಧ್ರುವನಾರಾಯಣ, ಎನ್. ಚಲುರಾಯಸ್ವಾಮಿ, ವಿಧಾನ ಪರಿಷತ್ ಸದಸ್ಯ ಸಿ.ಎಚ್. ವಿಜಯಶಂಕರ್, ಗೋ. ಮಧುಸೂದನ್, ಸಿದ್ಧರಾಜು, ಮರಿತಿಬ್ಬೇಗೌಡ, ಎಸ್. ನಾಗರಾಜು, ಪ್ರೊ.ಕೆ.ಆರ್. ಮಲ್ಲಿಕಾರ್ಜುನಪ್ಪ, ಕೆ.ವಿ. ನಾರಾಯಣಪ್ಪ, ಶಾಸಕರಾದ ತನ್ವೀರ್‌ಸೇಠ್, ಎಚ್.ಎಸ್. ಶಂಕರಲಿಂಗೇಗೌಡ, ಎಂ. ಸತ್ಯನಾರಾಯಣ, ಡಾ.ಎಚ್.ಸಿ. ಮಹಾದೇವಪ್ಪ, ವಿ. ಶ್ರೀನಿವಾಸಪ್ರಸಾದ್, ಕೆ. ವೆಂಕಟೇಶ್, ಎಚ್.ಪಿ. ಮಂಜುನಾಥ್, ಚಿಕ್ಕಣ್ಣ, ಸಾ.ರಾ. ಮಹೇಶ್ ಅವರು ಭಾಗವಹಿಸುವರು.
ಇದಲ್ಲದೆ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಎಸ್.ಡಿ. ಮಹೇಂದ್ರ, ಮೈಸೂರು ಬಣ್ಣ ಮತ್ತು ಅರಗು ಕಾರ್ಖಾನೆ ಎಂ.ಎಸ್. ಕೃಷ್ಣೇಗೌಡ, ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಇ. ಮಾರುತಿರಾವ್ ಪವಾರ್ ಸೇರಿದಂತೆ ಇತರರು ಆಗಮಿಸುವರು.
ಗಣರಾಜ್ಯೋತ್ಸವ ದಿನಾಚರಣೆಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಗರದ ಕಲಾಮಂದಿರದಲ್ಲಿ ಸಂಜೆ 6ಕ್ಕೆ ನಡೆಯಲಿವೆ. ಶಾಸಕ ಎಚ್.ಎಸ್. ಶಂಕರಲಿಂಗೇಗೌಡ ಅಧ್ಯಕ್ಷತೆ ವಹಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮಹಾಲಿಂಗು ಮತ್ತು ತಂಡದವರು ದೇಶ ಭಕ್ತಿಗೀತೆ ಮತ್ತು ನಾಡಗೀತೆ ಹಾಗೂ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡುವರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Video

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ, 1 ವರ್ಷ ಶಾಂತಿ ಕಾಪಾಡುವಂತೆ ಷರತ್ತು..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ