ಮೈಸೂರು

ಕುವೆಂಪು ಹೆಸರಲ್ಲಿ ರಾಷ್ಟ್ರಮಟ್ಟದ ಪ್ರಶಸ್ತಿ

ಮೈಸೂರು: ರಾಷ್ಟ್ರಕವಿ ಕುವೆಂಪು ಹೆಸರಿನಲ್ಲಿ ರಾಷ್ಟ್ರಮಟ್ಟದ ಪ್ರಶಸ್ತಿ ನೀಡಲು ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ತೀರ್ಮಾನಿಸಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಪ್ರೊ.ಹಂಪ ನಾಗರಾಜಯ್ಯ ಹೇಳಿದರು.
ಮೈಸೂರಿನ ವಿ.ವಿ. ಮೊಹಲ್ಲಾದ ಕುವೆಂಪು ಅವರ ಉದಯರವಿ ನಿವಾಸದ ಎದುರು ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ಬುಧವಾರ ಏರ್ಪಡಿಸಿದ್ದ ಕುವೆಂಪು ಸಾಹಿತ್ಯ ಪ್ರಸರಣ ಹೊಸ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
5 ಲಕ್ಷ ನಗದು ಒಳಗೊಂಡ ರಾಷ್ಟ್ರಕವಿ ಕುವೆಂಪು ಅವರ ಹೆಸರಿನ ರಾಷ್ಟ್ರಮಟ್ಟದ ಪ್ರಶಸ್ತಿಯನ್ನು ನೀಡಲಾಗುವುದು. ಈ ಪ್ರಶಸ್ತಿಯನ್ನು ದೇಶದ ದೊಡ್ಡ ವಿದ್ವಾಂಸರಿಗೆ ನೀಡಲು ತೀರ್ಮಾನಿಸಲಾಗಿದೆ. ಇದರ ಜತೆಗೆ ಕುವೆಂಪು ಅವರ ಸಮಗ್ರ ಸಾಹಿತ್ಯವು 10 ಸಾವಿರ ಪುಟ ಇದೆ. ಇದನ್ನು 12 ಸಂಪುಟಗಳಲ್ಲಿ ಹೊರ ತರಲು ತೀರ್ಮಾನಿಸಲಾಗಿದ್ದು, ಇದಕ್ಕೆ 6,300 ನಿಗದಿಪಡಿಸಲಾಗುತ್ತಿದೆ. ಮುಂಗಡವಾಗಿ 3 ಸಾವಿರ ಹಣ ನೀಡಿದವರಿಗೆ ಈ ಸಂಪುಟ ನೀಡಲಾಗುತ್ತದೆ ಎಂದು ಅವರು ಹೇಳಿದರು.
ರಾಮಾಯಣವು ಗಮಕ ರೂಪದಲ್ಲಿದೆ. ಇದನ್ನು ರಾಜ್ಯ ಗಮಕ ವಿಭಾಗ ಪರಿಷತ್ ಅಧ್ಯಕ್ಷ ಎಂ.ಎಸ್. ಸತ್ಯನಾರಾಯಣ್ ಅವರ ಮೂಲಕ ಕುವೆಂಪು ರಾಮಾಯಣದ ಡಿವಿಡಿ ಹೊರ ತರಲಾಗುತ್ತಿದೆ. ಇದರ ಜತೆಗೆ ಕುವೆಂಪು ಅವರ ಬಾಲ್ಯ ಮತ್ತು ಜೀವನ ಕುರಿತು ಚಿತ್ರ ಸಂಪುಟ ಹೊರ ತರಲಾಗುತ್ತಿದೆ.
ಬಿಡುಗಡೆಯಾಗಿದ್ದು 2 ಕೋಟಿ: ರಾಜ್ಯ ಸರ್ಕಾರ ಪ್ರತಿಷ್ಠಾನಕ್ಕೆ 5 ಕೋಟಿ ಬಿಡುಗಡೆ ಮಾಡುವುದಾಗಿ ಹೇಳಿತ್ತು. ಆದರೆ ಈಗ ಕೇವಲ 2 ಕೋಟಿ ಮಾತ್ರ ಬಿಡುಗಡೆ ಮಾಡಿದೆ. ಉಳಿದ ಹಣ ಬಿಡುಗಡೆಯಾಗಿಲ್ಲ ಎಂದರು.
ಕುವೆಂಪು ವ್ಯಕ್ತಿ ಮತ್ತು ವ್ಯಕ್ತಿತ್ವ ಕುರಿತು ಗುಜರಾತಿ ಮತ್ತು ರಾಜಸ್ಥಾನಿ ಭಾಷಾ ಅವತರಣಿಕೆ ಆಯಾ ರಾಜ್ಯಗಳಲ್ಲಿ ಈಗಾಗಲೇ ಬಿಡುಗಡೆಯಾಗಿದೆ. ಈ ಸಂಬಂಧ ಕಾರ್ಯಾಗಾರವೂ ನಡೆದಿದೆ. ಇಂದು ಆ ಅವತರಣಿಕೆಗಳನ್ನು ಇಲ್ಲಿಯೂ ಬಿಡುಗಡೆ ಮಾಡಲಾಗುವುದು ಎಂದು ಅವರು ತಿಳಿಸಿದರು.
ಕಾರ್ಯಕ್ರಮ ಉದ್ಘಾಟಿಸಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಮಾತನಾಡಿ, ಸರ್ಕಾರ ಬಜೆಟ್‌ನಲ್ಲಿ ಹಣ ನಿಗದಿಪಡಿಸಿದ ಮೇಲೆ ಬಿಡುಗಡೆ ಮಾಡಬೇಕು. ಈ ವಿಷಯದಲ್ಲಿ ತಕರಾರು ಮಾಡಬಾರದು ಎಂದು ಹೇಳಿದರು. ಬಸವರಾಜ್ ಅವರು ಕುವೆಂಪು ವ್ಯಕ್ತಿ ಮತ್ತು ವ್ಯಕ್ತಿತ್ವ ಪುಸ್ತಕ ಬಿಡುಗಡೆ ಮಾಡಿದರು. ಪ್ರೊ.ದೇಜಗೌ, ಪ್ರೊ.ಸಿಪಿಕೆ, ಸಿ. ಬಸವಲಿಂಗಯ್ಯ, ಪ್ರೊ.ಸಿ. ನಾಗಣ್ಣ ಇತರರು ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!