ಎಪಿಎಂಸಿಗೆ ನಾಗರಾಜು ನೇಮಕ
ಟಿ.ನರಸೀಪುರ: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ನಾಮನಿರ್ದೇಶಿತ ಸದಸ್ಯರನ್ನಾಗಿ ನಾಗರಾಜು ಅವರನ್ನು ನೇಮಿಸಲಾಗಿದೆ. ಕೃಷಿ ಉತ್ಪನ್ನ ಮಾರುಕಟ್ಟೆ ನಿಯಂತ್ರಣ ಮತ್ತು ಅಭಿವೃದ್ಧಿ ಅಧಿನಿಯಮದಡಿ ಈ ಹಿಂದೆ ನಾಮ ನಿರ್ದೇಶಿತ ಸದಸ್ಯರಾಗಿದ್ದ ಹುಣಸೂರು ಗ್ರಾಮದ ಎಂ. ಮಹದೇವಸ್ವಾಮಿ ಅವರ ಆಯ್ಕೆಯನ್ನು ರದ್ದುಗೊಳಿಸಿ, ಅವರಿಂದ ತೆರವಾದ ನಾಮನಿರ್ದೇಶಿತ ಸದಸ್ಯ ಸ್ಥಾನಕ್ಕೆ ನೂತನವಾಗಿ ನಾಗರಾಜು ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಹಕಾರ ಇಲಾಖೆಯ ಅಧೀನ ಕಾರ್ಯದರ್ಶಿಗಳು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.