ತಮಿಳುನಾಡು ವಿರುದ್ಧ ಪ್ರತಿಭಟನೆ
ಹುಣಸೂರು: ಕರ್ನಾಟಕದ ಗಡಿ ಭಾಗ ಹಾಗೂ ಕನ್ನಡಿಗರೇ ಹೆಚ್ಚು ವಾಸಿಸುವ ತಾಳವಾಡಿ ಪಿರ್ಕದ ಶಾಲೆಗಳಲ್ಲಿ ತಮಿಳು ಭಾಷೆಯನ್ನೆ ಪ್ರಥಮ ಭಾಷೆಯನ್ನಾಗಿ ಮಾಡಲು ಮುಂದಾಗಿರುವ ತಮಿಳುನಾಡು ಸರ್ಕಾರದ ಧೋರಣೆ ಖಂಡಿಸಿ ಡಾ. ರಾಜ್ಕುಮಾರ್, ಶಿವಣ್ಣ, ಪುನೀತ್ ಅಭಿಮಾನಿಗಳ ಸಂಘದ ಪದಾಧಿಕಾರಿಗಳು ಪ್ರತಿಭಟಿಸಿದರು. ಸಂಘದ ತಾ. ಅಧ್ಯಕ್ಷ ಅಕ್ಬರ್ ಮಾತನಾಡಿ, ತಾಳವಾಡಿಯಲ್ಲಿ ಕನ್ನಡಿಗರ ಸಂಖ್ಯೆ ಹೆಚ್ಚಿದ್ದರೂ ತಮಿಳುನಾಡು ಸರ್ಕಾರ ತಮಿಳು ಭಾಷೆಯನ್ನು ಪ್ರಥಮ ಭಾಷೆಯನ್ನಾಗಿ ಮಾಡಲು ಮುಂದಾಗಿರುವುದು ಖಂಡನೀಯ. ಸೌಹಾರ್ದತೆಯಿಂದ ಬದುಕುತ್ತಿರುವ ಜನರಲ್ಲಿ ಭಾಷೆಯ ವಿಷ ಬೀಜ ಬಿತ್ತುತ್ತಿರುವುದು ಸರಿಯಲ್ಲ. ದೇಶದ ಗಡಿಭಾಗದಲ್ಲಿ ನಮ್ಮನ್ನು ಕಾಯುತ್ತಿರುವ ಯೋಧರನ್ನು ಅಮಾನುಷವಾಗಿ ಹತ್ಯೆಗೈದಿರುವ ಪಾಕಿಸ್ತಾನದ ನಡೆಯನ್ನು ಖಂಡಿಸಿ ಕೇಂದ್ರ ಸರ್ಕಾರ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ನಾಗರಾಜ್ ಸೇರಿದಂತೆ ಅನೇಕರು ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.