ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

'ನಾಮಧಾರಿಗೌಡ ಸಮಾಜ 2ಎಗೆ ಸೇರಿಸಿ'

Parashurama
Updated On : 25 Jan 2013, 10:33 am

ಕೆ.ಆರ್.ನಗರ:  ನಾಮಧಾರಿಗೌಡ ಸಮಾಜವನ್ನು 2ಎ ವರ್ಗಕ್ಕೆ ಸೇರಿಸಲು ಸರ್ಕಾರದ ಮೇಲೆ ಒತ್ತಡ ಹೇರುವುದಾಗಿ ಶಾಸಕ ಸಾ.ರಾ. ಮಹೇಶ್ ಹೇಳಿದರು.
ಇಲ್ಲಿನ ನಾಮಧಾರಿ ಸಮುದಾಯ ಭವನದಲ್ಲಿ ಶುಕ್ರವಾರ ನಾಮಧಾರಿಗೌಡ ನೌಕರರ ಕ್ಷೇಮಾಭಿವೃದ್ಧಿ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜಕೀಯ ಇಚ್ಛಾಶಕ್ತಿಯ ಕೊರತೆಯಿಂದ ಸಮಾಜವು 2ಎ ವರ್ಗಕ್ಕೆ ಸೇರದ ಕಾರಣ ಅನೇಕರು ಉದ್ಯೋಗ, ಶಿಕ್ಷಣ ಮತ್ತು ರಾಜಕೀಯ ಹಾಗೂ ಸರ್ಕಾರಿ ಸವಲತ್ತುಗಳನ್ನು ಪಡೆಯುವಲ್ಲಿ ವಂಚಿತರಾಗಿದ್ದಾರೆ ಎಂದು ತಿಳಿಸಿದರು.
ಸಮಾಜವು 2ಎ ವರ್ಗದಲ್ಲಿ ಒಳಪಟ್ಟಿದ್ದರೆ ಇನ್ನಷ್ಟು ನೌಕರರನ್ನು ಕಾಣುವುದರ ಜೊತೆಗೆ, ಸ್ಥಳೀಯ ಸಂಸ್ಥೆಗಳಲ್ಲಿ ರಾಜಕೀಯ ಅಧಿಕಾರ ಹಿಡಿಯಲು ಸಾಧ್ಯವಾಗುತ್ತಿತ್ತು ಎಂದ ಅವರು, ತಾಲೂಕಿನ ಮಾರಗೌಡನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಸಮಾಜದ ಸಮುದಾಯಭವನ ಉದ್ಘಾಟಿಸಲು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಗಮಿಸಲಿದ್ದು, ಅವರಿಗೆ ನಾಮಧಾರಿ ಸಮಾಜವನ್ನು 2ಎ ವರ್ಗಕ್ಕೆ ಸೇರ್ಪಡೆ ಮಾಡುವಂತೆ ಸರ್ಕಾರದ ಒತ್ತಡ ಹೇರಲು ಮನವಿ ಮಾಡುವುದಾಗಿ ಹೇಳಿದರು.
ಸಂಘದ ಕ್ಯಾಲೆಂಡರ್ನ್ನು ಬಿಡುಗಡೆ ಮಾಡಿ, ನಿವೃತ್ತ ನೌಕರರನ್ನು ಸನ್ಮಾನಿಸಲಾಯಿತು. ಪುರಸಭಾಧ್ಯಕ್ಷ ತಮ್ಮನಾಯಕ, ನವನಗರ ಬ್ಯಾಂಕಿನ ಅಧ್ಯಕ್ಷ ಕೆ.ಎನ್. ಬಸಂತ್, ಸಂಘದ ಅಧ್ಯಕ್ಷ ಎಂ.ಆರ್. ಪುಟ್ಟರಾಜು, ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಪಿ. ಶಂಕರ್, ನಾಮಧಾರಿ ಗೌಡ ಸಂಘದ ಅಧ್ಯಕ್ಷ ನೀಲಕಂಠೇಗೌಡ, ಜಿಲ್ಲಾಧ್ಯಕ್ಷ ನಾಗರಾಜು, ನಿವೃತ್ತ ಉಪನಿರ್ದೇಶಕ ರಾಮಸ್ವಾಮಿ, ಸಂಘದ ಉಪಾಧ್ಯಕ್ಷ ಚಾಮರಾಜೇಗೌಡ, ಚನ್ನರಾಜ್, ಪ್ರಕಾಶ್, ಜಿ. ರಮೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments