ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ನಾಳೆ ರಜತ ಮಹೋತ್ಸವ

Parashurama
Updated On : 25 Jan 2013, 10:32 am

ಮೈಸೂರು:  ನವರತ್ನ ಜೈನ್ ದಿಗಂಬರ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ರಜತ ಮಹೋತ್ಸವ ಸಮಾರಂಭ ಜ.27ರ ಬೆಳಗ್ಗೆ 10.30ಕ್ಕೆ ಶ್ರೀರಾಂಪುರ 2ನೇ ಹಂತದ ಮಹಾವೀರ ಭವನದಲ್ಲಿ ನಡೆಯಲಿದೆ. ಕನಕಗಿರಿ ಜೈನಮಠದ ಭುವನಕೀರ್ತಿ ಭಟ್ಟಾರಕ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ನವರತ್ನ ಜೈನ ದಿಗಂಬರ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಪಿ.ಅಜಿತ್ಕುಮಾರ್ ಅಧ್ಯಕ್ಷತೆ ವಹಿಸುವರು. ಗೃಹ ಮಂಡಳಿ ಅಧ್ಯಕ್ಷ ಜಿ.ಟಿ. ದೇವೇಗೌಡ ಉದ್ಘಾಟಿಸಲಿದ್ದು, ಸಚಿವ ರಾಮದಾಸ್, ಭಾರತೀಯ ಜೈನ್ ಮಿಲನ್ನ ರಾಷ್ಟ್ರೀಯ ಕಾರ್ಯಾಧ್ಯಕ್ಷ ಡಿ. ಸುರೇಂದ್ರ ಕುಮಾರ್ ಅತಿಥಿಗಳಾಗಿ ಭಾಗವಹಿಸುವರು ಎಂದು ಸೊಸೈಟಿ ಅಧ್ಯಕ್ಷ ಪಿ. ಅಜಿತ್ ಕುಮಾರ್ ತಿಳಿಸಿದರು.
ಖೇಣಿ ಹೇಳಿಕೆಗೆ ಜೆಡಿಎಸ್ ಖಂಡನೆ
ಮೈಸೂರು:  ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಬಗ್ಗೆ ಸಲ್ಲದ ಮಾತನಾಡುವ ಕರ್ನಾಟಕ ಮಕ್ಕಳ ಪಕ್ಷದ ಸಂಸ್ಥಾಪಕ ಅಶೋಕ್ ಖೇಣಿ ರಾಜ್ಯ ಸರ್ಕಾರದ ನ್ಯೂನ್ಯತೆಗಳ ಬಗ್ಗೆ ಮಾತನಾಡಲಿ ಎಂದು ಯುವ ಜೆಡಿಎಸ್ನ 37ನೇ ವಾರ್ಡ್ ಅಧ್ಯಕ್ಷ ಎಂ.ಕೆ. ಸುದರ್ಶನ್ ಒತ್ತಾಯಿಸಿದ್ದಾರೆ.
ಕೈದಿ ಸಾವು
ಮೈಸೂರು:  ಜೀವವಾಧಿ ಶಿಕ್ಷೆಗೆ ಗುರಿಯಾಗಿದ್ದ ಮಹಿಳೆಯೊಬ್ಬರು ಹೃದಯಾಘಾತದಿಂದ ಶುಕ್ರವಾರ ಮೃತಪಟ್ಟಿದ್ದಾರೆ. ನಂಜನಗೂಡು ತಾಲೂಕು ಮರಳೂರು ಗ್ರಾಮದ ದೇವಮ್ಮ (50) ಮೃತಪಟ್ಟವರು. ಇವರು ವರದಕ್ಷಿಣೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿ ಮೈಸೂರು ಜೈಲಿನಲ್ಲಿ 2011ರ ಏ.8ರಿಂದ ಇದ್ದರು. ಶುಕ್ರವಾರ ಬೆಳಗ್ಗೆ ಸ್ನಾನ ಮುಗಿಸಿ ತಿಂಡಿ ತಿಂದು ಹೊರ ಬಂದ ಅವರು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಕೆ.ಆರ್. ಆಸ್ಪತ್ರೆ ವೈದ್ಯರು ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಇವರ ಪತಿ ಮತ್ತು ಪುತ್ರ ನಂಜನಗೂಡು ಜೈಲಿನಲ್ಲಿದ್ದಾರೆ.
ಸರ ಅಪಹರಣ
ಮೈಸೂರು:  ದೇವಸ್ಥಾನದಿಂದ ಮನೆಗೆ ಹಿಂದಿರುಗುತ್ತಿದ್ದ ಮಹಿಳೆಯೊಬ್ಬರ ಸರ ಅಪಹರಿಸಿರುವ ಘಟನೆ ಬೃಂದಾವನ ಬಡಾವಣೆಯಲ್ಲಿ  ಶುಕ್ರವಾರ ನಡೆದಿದೆ. ಶಿವಶಂಕರ್ ಎಂಬವರ ಪತ್ನಿ ಬೋರಮ್ಮ (50) ಅವರು ಬೆಳಗ್ಗೆ ದೇವಸ್ಥಾನಕ್ಕೆ ತೆರಳಿ ಪೂಜೆ ಮುಗಿಸಿ, ಮನೆಗೆ ಹಿಂದಿರುಗುವ ವೇಳೆ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು 30 ಗ್ರಾಂ. ಚಿನ್ನದ ಸರವನ್ನು ಅಪಹರಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments