ಮಕ್ಕಳ ಬಗ್ಗೆ ಹೆಚ್ಚಿನ ಗಮನಹರಿಸಿ: ಶಾಸಕ ಮಹೇಶ್
ಸಾಲಿಗ್ರಾಮ: ಪೋಷಕರು ತಮ್ಮ ಮಕ್ಕಳ ಬಗ್ಗೆ ಹೆಚ್ಚಿನ ಗಮನ ಹರಿಸಬೇಕೆಂದು ಶಾಸಕ ಸಾ.ರಾ. ಮಹೇಶ್ ಹೇಳಿದರು. ಪಟ್ಟಣದ ಬಾಹುಬಲಿ ಭವನದಲ್ಲಿ ಆಯೋಜಿಸಿದ್ದ ಶ್ರೀ ಭೈರವೇಶ್ವರ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವದಲ್ಲಿ ಮಾತನಾಡಿದ ಅವರು, ಶಿಕ್ಷಕರು ಶಾಲೆಯಲ್ಲಿ ಮಕ್ಕಳಿಗೆ ಎಷ್ಟೇ ವಿಷಯ ಹೇಳಿಕೊಟ್ಟರೂ ಮಕ್ಕಳು ತಮ್ಮ ಮನೆಗೆ ಹಿಂದಿರುಗಿದ ಸಮಯದಲ್ಲಿ ಶಾಲೆಯ ವಿಷಯಗಳನ್ನು ಪೋಷಕರು ಪುನರಾವರ್ತನೆ ಮಾಡಬೇಕು. ಮಕ್ಕಳಿಗೆ ಶಿಕ್ಷಣದ ಜತೆಗೆ ಸಮಾಜದಲ್ಲಿನ ಆಗುಹೋಗುಗಳ ವಿಷಯಗಳ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು. ಚಲನಚಿತ್ರ ನಟ ಹೊನ್ನವಳ್ಳಿ ಕೃಷ್ಣ, ಮೈಮುಲ್ ಮಾಜಿ ಅಧ್ಯಕ್ಷ ಎ.ಟಿ. ಸೋಮಶೇಖರ್, ಎಪಿಎಂಸಿ ನಿರ್ದೇಶಕ ಕುಪ್ಪಳ್ಳಿ ಸೋಮಶೇಖರ್, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎಸ್.ಕೆ. ಮಧುಚಂದ್ರ, ಗ್ರಾಪಂ ಅಧ್ಯಕ್ಷೆ ರಾಣಿ ರಾಜಣ್ಣ, ಮಾಜಿ ಅಧ್ಯಕ್ಷ ಎಸ್.ಎಸ್. ಜವರೇಗೌಡ, ಜೆಡಿಎಸ್ ರಾಜಣ್ಣ, ಭಾಸ್ಕರ್, ಧಾರ್ಮಿಕ ಮುಖಂಡ ಎಸ್.ಬಿ. ಗುಣಚಂದ್ರಕುಮಾರ್, ಪಿಎ್ಯ್ಐ ಮಹೇಶ್, ಸಿಆರ್ಪಿ ಮಂಜೇಗೌಡ ಇದ್ದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.