ಸಾಲಿಗ್ರಾಮ: 1.28 ಕೋಟಿ ವೆಚ್ಚದ ಕಾಮಗಾರಿ
ಹೊಸೂರು: ಸಾಲಿಗ್ರಾಮ ಜಿಪಂ ಕ್ಷೇತ್ರದ ವ್ಯಾಪ್ತಿಯ ಗ್ರಾಮಗಳಲ್ಲಿ ಇದುವರೆವಿಗೂ 1.28 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಜಿಪಂ ಸದಸ್ಯೆ ಸುಮಿತ್ರಾ ಗೋವಿಂದರಾಜು ಹೇಳಿದರು. ಕೆ.ಆರ್. ನಗರ ತಾಲೂಕಿನ ಚುಂಚನಕಟ್ಟೆಯಲ್ಲಿ 7 ಲಕ್ಷ ವೆಚ್ಚದ ಕಿರು ನೀರು ಸರಬರಾಜು ಯೋಜನೆಯ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, 7 ಗ್ರಾಮಗಳಲ್ಲಿ ಕುಡಿಯುವ ನೀರು ಸರಬರಾಜು ಮಾಡುವ ಓವರ್ಹೆಡ್ ಟ್ಯಾಂಕ್ಗಳ ನಿರ್ಮಾಣಕ್ಕೆ 1.15 ಕೋಟಿ, 7 ಗ್ರಾಮಗಳ ಶಾಲೆಗಳಿಗೆ ಕುಡಿಯುವ ನೀರು ಸರಬರಾಜು ಮಾಡಲು 12 ಲಕ್ಷ, ಮೂರು ಗ್ರಾಮಗಳ ಅಂಗನವಾಡಿ ಕಟ್ಟಡಗಳ ದುರಸ್ತಿಗೆ 1.50 ಲಕ್ಷ ಅನುದಾನ ಒದಗಿಸಲಾಗಿದೆ ಎಂದು ತಿಳಿಸಿದರು. ರಸ್ತೆ, ಆಸ್ಪತ್ರೆ ದುರಸ್ತಿ ಸೇರಿದಂತೆ ಮೂಲಭೂತ ಸವಲತ್ತುಗಳ ಕಾಮಗಾರಿಗಳಿಗೆ ಅನುದಾನ ನೀಡುತ್ತಿದ್ದು, ಸಾರ್ವಜನಿಕರು ಕಾಮಗಾರಿಗಳನ್ನು ಪರಿಶೀಲಿಸಿ ಕಳಪೆ ಕಂಡು ಬಂದರೆ ಚುನಾಯಿತ ಜನಪ್ರತಿನಿಧಿಗಳಿಗೆ ಮತ್ತು ಅಧಿಕಾರಿಗಳಿಗೆ ದೂರು ನೀಡಬೇಕೆಂದು ತಿಳಿಸಿದರು. ಗ್ರಾ.ಪಂ ಅಧ್ಯಕ್ಷ ಮಂಜುನಾಥ್, ಕಾಮತ್ಬಾಬು, ವೆಂಕಟೇಗೌಡ, ಆಶ್ರಯ ಸಮಿತಿ ಮಾಜಿ ಸದಸ್ಯ ರಮೇಶ್, ಅಶ್ವಥ್ ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.