ಹುಣಸೂರಿನಲ್ಲಿ ಸಾಮೂಹಿಕ ಪ್ರಾರ್ಥನೆ
ಹುಣಸೂರು: ಮಹಮದ್ ಪೈಗಂಬರ್ ಹುಟ್ಟುಹಬ್ಬದ ಅಂಗವಾಗಿ ಮುಸ್ಲಿಂ ಬಾಂಧವರು ಪಟ್ಟಣದಲ್ಲಿ ಸಡಗರ ಸಂಭ್ರಮದಿಂದ ಈದ್-ಮಿಲಾದ್ ಆಚರಿಸಿದರು. ಈದ್ಗಾ ಮೈದಾನದಲ್ಲಿ ಜಮಾವಣೆಗೊಂಡ ಮುಸ್ಲಿಂ ಬಂಧುಗಳು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಮೆರವಣಿಗೆಯಲ್ಲಿ ಸ್ತಬ್ಧಚಿತ್ರ ಗಮನ ಸೆಳೆದರು. ನೂರಾರು ವಾಹನಗಳಲ್ಲಿ ಮುಸ್ಲಿಂ ಬಾಂಧವರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ರಾಯಲ್ ಶಾಲೆ ಮಕ್ಕಳು ದೇವರ ಸ್ತುತಿಗೆ ನರ್ತಿಸಿದರು. ಜಾಮಿಯಾ ಮಸೀದಿಯ ಮೌಲ್ವಿ ಷಾ ಅಲಂ, ಖಯಾಮುದ್ದೀನ್, ಜಾಮಿಯಾ ಮಸೀದಿಯ ಸಮಿತಿ ಅಧ್ಯಕ್ಷ ಅನ್ವರ್ ಪಾಷಾ, ಜಸ್ಮೀ ಮಿಲಾದುನ್ನಬೀ ಸಮಿತಿ ಅಧ್ಯಕ್ಷ ಸರ್ದಾರ್ ಅಹಮದ್, ಪುರಸಭಾ ಸದಸ್ಯರಾದ ಹಜರತ್ ಜಾನ್, ಜಾಕೀರ್ ಹುಸೇನ್, ಮಜಾಜ್ ಅಹಮದ್, ರಿಜ್ವಾನ್, ಜಿ.ಪಂ.ಮಾಜಿ ಸದಸ್ಯ ಎಚ್.ಎಂ. ಫಜಲುಲ್ಲಾ ಸೇರಿದಂತೆ ಇತರರು ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.