ಕಾಪಿ ಹೊಡೆದರೆ ಜೈಲು ಶಿಕ್ಷೆ: ರಾಮದಾಸ್
ಮೈಸೂರು: ಇತ್ತೀಚೆಗೆ ವಿದ್ಯಾರ್ಥಿಗಳು ಪರೀಕ್ಷಾ ಅಕ್ರಮಗಳಲ್ಲಿ ತೊಡಗುತ್ತಿರುವುದು ಹೆಚ್ಚಾಗುತ್ತಿದೆ. ದುಡ್ಡು ಕೊಟ್ಟು ಕಾಪಿ (ಪರೀಕ್ಷೆಯಲ್ಲಿ ನಕಲು) ಹೊಡೆಯುತ್ತಿದ್ದಾರೆ. ಇದನ್ನು ತಡೆಯಲು ಕಾಪಿ ಹೊಡೆದರೆ ಜೈಲು ಶಿಕ್ಷೆ ವಿಧಿಸಲು ಹೊಸ ಕಾನೂನು ರೂಪಿಸಲು ಚಿಂತಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ರಾಮದಾಸ್ ಹೇಳಿದರು. ಮೈಸೂರಿನಲ್ಲಿ ಶನಿವಾರ ನಡೆದ ಗಣರಾಜ್ಯೋತ್ಸವದಲ್ಲಿ ಮಾತನಾಡಿ, ವೈದ್ಯಕೀಯ ವಿದ್ಯಾರ್ಥಿಗಳು ಕಾಪಿ ಹೊಡೆದು ಪಾಸಾದರೆ ರೋಗಿಗಳಿಗೆ ಉತ್ತಮ ಚಿಕಿತ್ಸೆ ದೊರೆಯುವುದು ಕಷ್ಟ. ಹೀಗಾಗಿ, ಕಾಪಿ ಹೊಡೆದರೆ ಜೈಲು ಶಿಕ್ಷೆ ಕಾನೂನನ್ನು ವೈದ್ಯಕೀಯ ಶಿಕ್ಷಣದಿಂದಲೇ ಜಾರಿಗೆ ಚಿಂತಿಸಲಾಗಿದೆ ಎಂದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.