30ಕ್ಕೆ ರಾಜ್ಯಾದ್ಯಂತ ಗ್ರಾಮೀಣ ಬ್ಯಾಂಕ್ ನೌಕರರ ಪ್ರತಿಭಟನೆ
ಮೈಸೂರು: ವಾಣಿಜ್ಯ ಬ್ಯಾಂಕ್ ನೌಕರರಂತೆಯೇ ಗ್ರಾಮೀಣ ಬ್ಯಾಂಕ್ಗಳ ನೌಕರರ ವೇತನ ಮತ್ತು ಇತರೆ ಸೌಲಭ್ಯ ಜಾರಿಯಲ್ಲಿ ಸಮಾನತೆ ನೀಡಬೇಕು ಮತ್ತು ರಾಷ್ಟ್ರೀಯ ಗ್ರಾಮೀಣ ಬ್ಯಾಂಕ್ ಸ್ಥಾಪಿಸಬೇಕೆಂದು ಒತ್ತಾಯಿಸಿ ಜ.30 ರಂದು ರಾಜ್ಯದ ಎಲ್ಲಾ ಗ್ರಾಮೀಣ ಬ್ಯಾಂಕ್ಗಳ ಪ್ರಧಾನ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲು ಅಖಿಲ ಭಾರತ ಗ್ರಾಮೀಣ ಬ್ಯಾಂಕ್ ನೌಕರರ ಸಂಘ ನಿರ್ಧರಿಸಿದೆ.
ಗ್ರಾಮೀಣ ಬ್ಯಾಂಕ್ಗಳ ನೌಕರರು ಇಂದು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ವಾಣಿಜ್ಯ ಬ್ಯಾಂಕ್ಗಳ ನೌಕರರಿಗೆ ಇರುವ ವೇತನ ಮತ್ತು ಇತರೆ ಸೌಲಭ್ಯಗಳು ಗ್ರಾಮೀಣ ಬ್ಯಾಂಕ್ಗಳ ನೌಕರರಿಗೆ ಲಭ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಜ.30 ರಂದು ರಾಜ್ಯದ ಎಲ್ಲಾ ಗ್ರಾಮೀಣ ಬ್ಯಾಂಕುಗಳ ಪ್ರಧಾನ ಕಚೇರಿಗಳ ಮುಂದೆ ಒಂದು ದಿನದ ಧರಣಿ ಸತ್ಯಾಗ್ರಹ ನಡೆಸಲಾಗುತ್ತದೆ ಎಂದು ಸಂಘದ ಮಹಾಪ್ರಧಾನ ಕಾರ್ಯದರ್ಶಿ ದಿಲೀಪ್ ಕುಮಾರ್ ಮುಖರ್ಜಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.